Monday, September 7, 2026
Join WhatsApp Group
HomeLocal Newsದಾಂಡೇಲಿ ರೌಡಿ ಶೀಟರ್‌ಗೆ ಗಡಿಪಾರು ಶಿಕ್ಷೆ

ದಾಂಡೇಲಿ ರೌಡಿ ಶೀಟರ್‌ಗೆ ಗಡಿಪಾರು ಶಿಕ್ಷೆ

ದಾಂಡೇಲಿ: ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಆಸಾಮಿಯೊಬ್ಬನನ್ನು ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಆದೇಶ ಹೊರಡಿಸಿದ್ದಾರೆ.

ದಾಂಡೇಲಿಯ ಬರ್ಚಿ ರಸ್ತೆ, ಜನತಾ ವಿದ್ಯಾಲಯ ಸಮೀಪದ ನಿವಾಸಿ ಬಾಬು ರಾಮಪ್ಪ ದೊಡ್ಡಮನಿ (41) ಎಂಬಾತನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ 2012ರಿಂದ 2025ರವರೆಗೆ ಒಟ್ಟು 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಆತನ ವಿರುದ್ಧ ಎರಡು ಕೊಲೆ ಯತ್ನ, ಮೂರು ದೊಂಬಿ, ಒಂದು ಜೂಜಾಟ, ಒಂದು ಲೈಂಗಿಕ ದೌರ್ಜನ್ಯ, ಒಂದು ಹಲ್ಲೆ ಹಾಗೂ ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಒಂದು ಪ್ರಕರಣ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ರೌಡಿ ಶೀಟ್ ತೆರೆಯಲಾಗಿತ್ತು. ಆದರೂ ಆತ ತನ್ನ ಚಟುವಟಿಕೆಗಳಲ್ಲಿ ಸುಧಾರಣೆ ತೋರದೆ ಕ್ರಿಮಿನಲ್ ಕೃತ್ಯಗಳನ್ನು ಮುಂದುವರಿಸಿದ್ದ.

ಸಮಾಜದ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವುದಾಗಿ ಕಂಡುಬಂದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಗಡಿಪಾರಿಗೆ ಸಂಬಂಧಿಸಿದಂತೆ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ, ಅಭಿಯೋಜನೆ ಹಾಗೂ ಪ್ರತಿವಾದಿಯ ವಾದಗಳನ್ನು ಆಲಿಸಿದ ಬಳಿಕ, ಬಾಬು ದೊಡ್ಡಮನಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

ಆದೇಶದಂತೆ ಆರೋಪಿಯನ್ನು ಬೀದರ ಜಿಲ್ಲೆಯ ಬೀದರ ಸಬ್ ಅರ್ಬನ್ (ಬೀದರ ನಗರ) ಪೊಲೀಸ್ ಠಾಣೆ ವ್ಯಾಪ್ತಿಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿನ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share