Monday, September 7, 2026
Join WhatsApp Group
HomeLocal Newsಮಟ್ಕಾ ಆಡಿಸುತ್ತಿದ್ದವನಿಗೆ ಜೈಲೇ ಗತಿ!

ಮಟ್ಕಾ ಆಡಿಸುತ್ತಿದ್ದವನಿಗೆ ಜೈಲೇ ಗತಿ!

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಓಸಿ (ಮಟ್ಕಾ) ಜೂಜಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿ, ಜೂಜಾಟಕ್ಕೆ ಬಳಸುತ್ತಿದ್ದ ನಗದು ಹಾಗೂ ಇತರೆ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ಮಹೇಶ ಕೇಶವ ಹೆಗಡೆ (44) ಬಂಧಿತ ಆರೋಪಿ.

ಜೂನ್ 12ರಂದು ಮಧ್ಯಾಹ್ನ 1.15ರ ಸುಮಾರಿಗೆ ಶಿರಸಿ ನಗರದ ಆನೆಹೊಂಡ ಕಚ್ಚಾ ರಸ್ತೆ ಬದಿಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ತನ್ನ ಅನ್ಯಾಯದ ಲಾಭಕ್ಕಾಗಿ ಬರುವ-ಹೋಗುವ ಜನರಿಗೆ ಒಂದು ರೂಪಾಯಿಗೆ 80 ರೂಪಾಯಿ ನೀಡುವುದಾಗಿ ಹೇಳಿ ಅಂಕೆ-ಸಂಖ್ಯೆಗಳ ಮೇಲೆ ಪಂಥ ಕಟ್ಟಿಸಿಕೊಂಡು ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದಾನೆ ಎಂಬ ಮಾಹಿತಿ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ನರಸಿಂಹಲು ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ದಾಳಿ ವೇಳೆ ಆರೋಪಿಯಿಂದ ₹570 ನಗದು, ಅಂಕೆ-ಸಂಖ್ಯೆ ಬರೆದ ಒಂದು ಚೀಟಿ, ಒಂದು ಬಾಲ್ ಪೆನ್ ಹಾಗೂ ಜೂಜಾಟದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share