Monday, September 7, 2026
Join WhatsApp Group
HomeLocal Newsಖಾದಿ ಉಡುಪು ಖರೀದಿಗೆ ನೌಕರರ ಪ್ರೋತ್ಸಾಹ

ಖಾದಿ ಉಡುಪು ಖರೀದಿಗೆ ನೌಕರರ ಪ್ರೋತ್ಸಾಹ

ಕಾರವಾರ: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆಯಂತೆ ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ನಿಗಮ/ ಮಂಡಳಿ/ ಸ್ವಾಯತ್ತ ಸಂಸ್ಥೆಗಳು /ವಿಶ್ವವಿದ್ಯಾಲಯಗಳ ಅಧಿಕಾರಿ/ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವ ಕುರಿತಂತೆ, ಉತ್ತರ ಕನ್ನಡ ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ, ಹುಬ್ಬಳ್ಳಿ ಯ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾತ್ಕಾಲಿಕ ಮಳಿಗೆಯನ್ನು ತೆರೆಯಲಾಗಿತ್ತು.

 ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರಕಾರಿ ನೌಕರರಿಗೆ ಖಾದಿ ಉಡುಪನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ನೌಕರರು ಅತ್ಯಂತ ಉತ್ಸಾಹದಿಂದ ಖಾದಿ ಉಡುಪುಗಳನ್ನು ಖರೀದಿಸಿದರು.

ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಇದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share