Wednesday, June 17, 2026
HomeLocal Newsಮೋದಿ ಆಡಳಿತದ 12 ವರ್ಷ: ರೈತರಿಗೆ ನೈಸರ್ಗಿಕ ಕೃಷಿ ಕಾರ್ಯಾಗಾರ

ಮೋದಿ ಆಡಳಿತದ 12 ವರ್ಷ: ರೈತರಿಗೆ ನೈಸರ್ಗಿಕ ಕೃಷಿ ಕಾರ್ಯಾಗಾರ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಧಾನಮಂತ್ರಿಯಾಗಿ ಯಶಸ್ವಿ 12 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, “ವಿಶ್ವಾಸ ಕೇ, ವಿಕಾಸ ಕೇ, ಜನ ಕಲ್ಯಾಣ ಕೇ” ಎಂಬ ಘೋಷವಾಕ್ಯದಡಿ ಬಿಜೆಪಿ ರೈತ ಮೋರ್ಚಾ, ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ನೈಸರ್ಗಿಕ ಕೃಷಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

ರೈತರು ಸಾವಯವ ಗೊಬ್ಬರಗಳ ಬಳಕೆಯ ಮೂಲಕ ಉತ್ತಮ ಇಳುವರಿ ಪಡೆಯುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಜೂನ್ 20ರಂದು ಶನಿವಾರ ಬೆಳಿಗ್ಗೆ 10.30ಕ್ಕೆ ಕುಮಟಾ ತಾಲೂಕಿನ ಅಂತ್ರವಳ್ಳಿ ಗ್ರಾಮದ ಕಡಸಾಲಗದ್ದೆಯಲ್ಲಿರುವ ಪ್ರಗತಿಪರ ಕೃಷಿಕ ಎನ್.ಡಿ. ಹೆಗಡೆ ಅವರ ತೋಟದಲ್ಲಿ ನಡೆಯಲಿದೆ.

ಕಾರ್ಯಾಗಾರದಲ್ಲಿ ನೈಸರ್ಗಿಕ ಕೃಷಿ ಪದ್ಧತಿ, ಸಾವಯವ ಗೊಬ್ಬರಗಳ ಮಹತ್ವ ಮತ್ತು ಉಪಯೋಗ, ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನಗಳು, ಜೀವಾಮೃತ, ಬೀಜಾಮೃತ ಹಾಗೂ ಘನಜೀವಾಮೃತ ತಯಾರಿಕೆ, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಆದಾಯ ಗಳಿಸುವ ತಂತ್ರಗಳು, ನೈಸರ್ಗಿಕ ರೀತಿಯ ರೋಗ ಮತ್ತು ಕೀಟ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು. ಜೊತೆಗೆ ರೈತರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತೂ ಅರಿವು ಮೂಡಿಸಲಾಗುವುದು.

ಕಾರ್ಯಕ್ರಮದಲ್ಲಿ ಶಾಸಕರು, ಸಂಸದರು, ಜನಪ್ರತಿನಿಧಿಗಳು ಹಾಗೂ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share