Friday, June 19, 2026
HomeLocal Newsನವಚೇತನ ಒಕ್ಕೂಟದಲ್ಲಿ ಉದ್ಯೋಗಾವಕಾಶ

ನವಚೇತನ ಒಕ್ಕೂಟದಲ್ಲಿ ಉದ್ಯೋಗಾವಕಾಶ

ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪಳೇಶ್ವರದಲ್ಲಿರುವ ಗ್ರಾಮ ಪಂಚಾಯಿತಿ ಮಟ್ಟದ ನವಚೇತನ ಒಕ್ಕೂಟದಲ್ಲಿ ದೈನಂದಿನ ಆಡಳಿತ ಹಾಗೂ ಲೆಕ್ಕಪತ್ರ ಕಾರ್ಯಗಳನ್ನು ನಿರ್ವಹಿಸಲು ಮುಖ್ಯ ಪುಸ್ತಕ ಬರಹಗಾರ್ತಿ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಹಿಳಾ ಸ್ವಸಹಾಯ ಸಂಘದ ಸದಸ್ಯರಾಗಿರಬೇಕು. ಪಿಯುಸಿ ಅಥವಾ ಅದಕ್ಕಿಂತ ಹೆಚ್ಚಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಸ್ವಸಹಾಯ ಸಂಘಗಳ ಸದಸ್ಯರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವ ಸಾಮರ್ಥ್ಯ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ₹7,000 ಗೌರವಧನ ನೀಡಲಾಗುವುದು. ಕಾರ್ಯಕ್ಷಮತೆಯ ಆಧಾರದ ಮೇಲೆ ಗೌರವಧನವನ್ನು ₹9,000ರವರೆಗೆ ಹೆಚ್ಚಿಸುವ ಅವಕಾಶವಿದೆ.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಂಚಾಯಿತಿ ಯಲ್ಲಾಪುರದ ಗ್ರಾಮೀಣ ಜೀವನೋಪಾಯ (ಗ್ರಾ.ಜೀ) ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮಂಜಣ್ಣ ಬಿ. (ಮೊ. 9108166296) ಅಥವಾ ವಲಯ ಮೇಲ್ವಿಚಾರಕ ರಾಜಾರಾಮ ವೈದ್ಯ (ಮೊ. 9480508512) ಅವರನ್ನು ಸಂಪರ್ಕಿಸಬಹುದು ಎಂದು ನವಚೇತನ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟದ ಚಂದಗುಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share