Monday, September 7, 2026
Join WhatsApp Group
HomeCrimeಶರಾವತಿ ತಟದಲ್ಲಿ ಕೋಳಿ ಅಂಕ; ಮೂವರು ವಶಕ್ಕೆ

ಶರಾವತಿ ತಟದಲ್ಲಿ ಕೋಳಿ ಅಂಕ; ಮೂವರು ವಶಕ್ಕೆ

ಹೊನ್ನಾವರ: ಶರಾವತಿ ನದಿಯ ಕೋಡಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಹೊನ್ನಾವರ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಹೊನ್ನಾವರ ತಾಲೂಕಿನ ಕೆಳಗಿನ ಮೂಡ್ಕಣಿ ಪ್ರದೇಶದ ಶರಾವತಿ ನದಿಯ ಕೋಡಿ ಬಳಿ ಗುರುವಾರ ಬೆಳಿಗ್ಗೆ ಸುಮಾರು 11.45ರ ವೇಳೆಗೆ ಕೆಲವರು ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ವಿಲಿಯಂ ಸಂತಾನ ಮಿರಾಂಡ (41), ಮಂಜುನಾಥ ನಾಯ್ಕ (62) ಹಾಗೂ ಶ್ರೀಪಾದ ನಾಯ್ಕ (30) ಎಂಬುವರು ಸಿಕ್ಕಿಬಿದ್ದಿದ್ದು, ಸಮರ್ಥ ನಾಯ್ಕ, ಭರತ್ ಹಳ್ಳೇರ ಸೇರಿದಂತೆ ಇನ್ನೂ ಕೆಲವರು ಸ್ಥಳದಿಂದ ಪರಾರಿಯಾಗಿದ್ದಾರೆ.

ಕಾರ್ಯಾಚರಣೆಯ ವೇಳೆ ₹2,460 ನಗದು, ಒಂದು ಕೋಳಿ ಹುಂಜ ಹಾಗೂ ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕತ್ತಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಪರಾರಿಯಾದ ಆರೋಪಿತರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share