Monday, September 7, 2026
Join WhatsApp Group
HomeLocal Storyಮಾಣಿಕ್ಯ ಹೋಟೆಲ್ ಎದುರು ಮಟ್ಕಾ ಅಡ್ಡೆ ಮೇಲೆ ದಾಳಿ

ಮಾಣಿಕ್ಯ ಹೋಟೆಲ್ ಎದುರು ಮಟ್ಕಾ ಅಡ್ಡೆ ಮೇಲೆ ದಾಳಿ

ಸಿದ್ದಾಪುರ: ಸಾರ್ವಜನಿಕ ರಸ್ತೆಯಲ್ಲೇ ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ಸಿದ್ದಾಪುರ ತಾಲೂಕಿನ ವಂದಾನೆ ಗ್ರಾಮದಲ್ಲಿ ನಡೆದಿದೆ.

ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಶಾಂತಿನಾಥ ಕೆ. ಪಾಸಾನೆ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಜೂನ್ 20ರಂದು ಮಧ್ಯಾಹ್ನ ಸುಮಾರು 12.15ರ ವೇಳೆಗೆ ವಂದಾನೆ ಗ್ರಾಮದ ಮಾಣಿಕ್ಯ ಹೋಟೆಲ್ ಎದುರಿನ ಸಾರ್ವಜನಿಕ ರಸ್ತೆಯಲ್ಲಿ ಮಂಜುನಾಥ ಸುಬ್ಬಾ ಗೌಡ (49), ಕಲಕೈ-ಲಂಬಾಪುರ ನಿವಾಸಿ, ಶಿರಸಿಯ ಉದಯ ಶೆಟ್ಟಿ ಎಂಬ ಬುಕ್ಕಿಯ ಸಹಾಯದಿಂದ ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದಾನೆ ಎಂಬ ಖಚಿತ ಮಾಹಿತಿ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು, ಸ್ಥಳದಲ್ಲೇ ಮಂಜುನಾಥನನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ₹1,950 ನಗದು, ಮಟ್ಕಾ ಅಂಕಿ ಬರೆದ ಚೀಟಿ, ಒಂದು ಬಾಲ್ ಪೆನ್ ಹಾಗೂ ಅಂಕೆ ಬರೆಯಲು ಬಳಸುತ್ತಿದ್ದ ಕಾಗದದ ಚೂರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಸಂಘಟಿತವಾಗಿ ಅಕ್ರಮ ಜೂಜಾಟ ನಡೆಸುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share