Thursday, July 23, 2026
Join WhatsApp Group
HomeLocal Newsದೇಶಸೇವೆಯತ್ತ ಹೆಜ್ಜೆ: ʻಅಗ್ನಿವೀರʼರಾದ ಮೂವರು ವಿದ್ಯಾರ್ಥಿಗಳು

ದೇಶಸೇವೆಯತ್ತ ಹೆಜ್ಜೆ: ʻಅಗ್ನಿವೀರʼರಾದ ಮೂವರು ವಿದ್ಯಾರ್ಥಿಗಳು

ಕಾರವಾರ: ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ (ಸ್ವಾಯತ್ತ)ದ ಮೂವರು ವಿದ್ಯಾರ್ಥಿಗಳು ಭಾರತೀಯ ಸಶಸ್ತ್ರ ಪಡೆಗಳ ಪ್ರತಿಷ್ಠಿತ ಅಗ್ನಿವೀರ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಮೂಲಕ ಮಹಾವಿದ್ಯಾಲಯಕ್ಕೆ ಹೆಮ್ಮೆ ತಂದಿದ್ದಾರೆ.

ವಿದ್ಯಾರ್ಥಿಗಳಾದ ಇರೇಶ್ ಎಸ್. ಕುರಿ, ಮಂಜುನಾಥ ಎಲ್. ಬಳ್ಳಾರಿ(ಅಂತಿಮ ವರ್ಷದ ಬಿ.ಕಾಂ.) ಹಾಗೂ ವಿಘ್ನೇಶ್ ಗೌಡ (4ನೇ ಸೆಮಿಸ್ಟರ್ ಬಿಬಿಎ) ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಮಾತನಾಡಿದ ಪ್ರಾಂಶುಪಾಲೆ ಗೀತಾ ವಾಲೀಕರ್, ರಾಷ್ಟ್ರ ರಕ್ಷಣೆಯಂತಹ ಮಹತ್ತರ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಅವಕಾಶ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ಅವರ ಸಾಧನೆ ಕಠಿಣ ಪರಿಶ್ರಮ, ಶಿಸ್ತು ಹಾಗೂ ದೇಶಸೇವೆಯ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಇದು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ ಎನ್‌ಸಿಸಿ ಅಧಿಕಾರಿಗಳು, ವಿಭಾಗ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಕಾಲೇಜಿನ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

1 COMMENT

  1. ಒಳ್ಳೆಯ ಹಾದಿಯನ್ನೇ ಆಯ್ಕೆ ಮಾಡಿಕೊಂಡ ಹುಡುಗರಿಗೆ ಒಳ್ಳೆಯದಾಗಲಿ

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share