Monday, September 7, 2026
Join WhatsApp Group
HomeLocal Newsಹಾವು ಕಡಿತಕ್ಕೆ ವಿದ್ಯಾರ್ಥಿ ಬಲಿ: ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್

ಹಾವು ಕಡಿತಕ್ಕೆ ವಿದ್ಯಾರ್ಥಿ ಬಲಿ: ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಹೆಬ್ಬಾರ್

ಬನವಾಸಿ: ಹಾವು ಕಡಿತದಿಂದ ಆರನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಬನವಾಸಿ ಹೋಬಳಿ ವ್ಯಾಪ್ತಿಯ ಸಹಸ್ರಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು ಮಿಥುನ ನಾಯ್ಕ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಯ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಬಳಿಕ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕರು, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳು ಹಾಗೂ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿದ್ಯಾರ್ಥಿಯ ಅಕಾಲಿಕ ನಿಧನದಿಂದ ಸಹಸ್ರಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share