ಕಾರವಾರ: ರಾಜ್ಯದ ಪ್ರವಾಸಿ ತಾಣಗಳ ಉತ್ತೇಜನ ಹಾಗೂ ಪ್ರಚಾರದ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ಒಂದು ತಿಂಗಳ ಪ್ರವಾಸಿ ಮಾರ್ಗದರ್ಶಿ (ಟೂರಿಸ್ಟ್ ಗೈಡ್) ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಸಿಪಿ/ಟಿಎಸ್‌ಪಿ ಯೋಜನೆ ಅಡಿಯಲ್ಲಿ ನಡೆಯಲಿರುವ ಈ ತರಬೇತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಜಾಕೇಟ್ ಹಾಗೂ ಒಂದು ಜೋಡಿ ಸ್ಪೋರ್ಟ್ಸ್ ಶೂ ಸಹ ನೀಡಲಾಗುತ್ತದೆ.
ಉತ್ತರ ಕನ್ನಡ ಜಿಲ್ಲೆಯ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ 21ರಿಂದ 48 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಜುಲೈ 5ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಗೋವಾ ರಸ್ತೆ, ಆರ್‌ಟಿಒ ಕಚೇರಿ ಹತ್ತಿರ, ಕಾರವಾರ ಇಲ್ಲಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08382-221172 ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.