Monday, September 7, 2026
Join WhatsApp Group
HomeCrimeಕಾಡಿನಲ್ಲಿ ಕೌಶಲ್ಯದಾಟ; ಮೂವರು ವಶಕ್ಕೆ, ಓರ್ವ ಪರಾರಿ

ಕಾಡಿನಲ್ಲಿ ಕೌಶಲ್ಯದಾಟ; ಮೂವರು ವಶಕ್ಕೆ, ಓರ್ವ ಪರಾರಿ

ಯಲ್ಲಾಪುರ: ತಾಲೂಕಿನ ಕೆ. ಮಿಲಾನ್ ಹೋಟೆಲ್ ಕ್ರಾಸ್ ಸಮೀಪದ ಅರಣ್ಯ ಪ್ರದೇಶದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದವರ ಮೇಲೆ ಯಲ್ಲಾಪುರ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಬಂಧಿತರನ್ನು ಬಾಲಚಂದ್ರ (25), ಅಣ್ಣಪ್ಪ (28) ಹಾಗೂ ಪ್ರವೀಣ್ (30) ಎಂದು ಗುರುತಿಸಲಾಗಿದೆ. ಕಿರಣ ಸಿದ್ದಿ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ.

ಆರೋಪಿತರು ಬಸ್ ನಿಲ್ದಾಣದ ಹಿಂದಿನ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣವಾಗಿ ಕಟ್ಟಿ ಅದೃಷ್ಟದ ಆಟವಾದ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದರು. ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕ ರಾಜಶೇಖರ ವಂದಲಿ ನೇತೃತ್ವದಲ್ಲಿ ದಾಳಿ ನಡೆಸಿದ ವೇಳೆ ಮೂವರು ಸಿಕ್ಕಿಬಿದ್ದರೆ, ಓರ್ವ ತಪ್ಪಿಸಿಕೊಂಡಿದ್ದಾನೆ.

ದಾಳಿಯ ವೇಳೆ ಆರೋಪಿತರಿಂದ ₹2,150 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿಗಾಗಿ ಶೋಧ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share