Friday, July 24, 2026
Join WhatsApp Group
HomeCrimeಗಾಂಜಾ ಅಮಲು; ಶಿರಸಿಯಲ್ಲಿ ಯುವಕನ ವಿರುದ್ಧ ಪ್ರಕರಣ

ಗಾಂಜಾ ಅಮಲು; ಶಿರಸಿಯಲ್ಲಿ ಯುವಕನ ವಿರುದ್ಧ ಪ್ರಕರಣ

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಶಿರಸಿಯ ರಾಮನಬೈಲ್ ನಿವಾಸಿ 24 ವರ್ಷದ ಅರ್ಪಾತ್ ಅಬ್ದುಲ್ ಗಫಾರ್ ಖಾನ್ ವಿರುದ್ಧ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜುಲೈ 5ರಂದು ಬೆಳಿಗ್ಗೆ 9.45ರ ಸುಮಾರಿಗೆ ಶಿರಸಿ-ಯಲ್ಲಾಪುರ ರಸ್ತೆಯ ಅರ್ಬನ್ ಬ್ಯಾಂಕ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಆರೋಪಿಯು ಗಾಂಜಾ ಸೇವನೆಯ ಅಮಲಿನಲ್ಲಿರುವ ಶಂಕೆಯ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಬಸವರಾಜ ಕನಶೆಟ್ಟಿ ಅವರು ಸರ್ಕಾರದ ಪರವಾಗಿ ನೀಡಿದ ದೂರಿನ ಆಧಾರದ ಮೇಲೆ ಶಿರಸಿ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share