Friday, July 24, 2026
Join WhatsApp Group
HomeLocal Newsಬೈಕ್ ಸ್ಕಿಡ್‌ ಆಗಿ ಮಹಿಳೆಗೆ ಗಂಭೀರ ಗಾಯ

ಬೈಕ್ ಸ್ಕಿಡ್‌ ಆಗಿ ಮಹಿಳೆಗೆ ಗಂಭೀರ ಗಾಯ

ಯಲ್ಲಾಪುರ: ತಾಲೂಕಿನ ಮಳಲಗಾಂವ ಬಸ್ ನಿಲ್ದಾಣದ ಸಮೀಪ ಬೈಕ್ ಸ್ಕಿಡ್‌ ಆಗಿ ಹಿಂಬದಿ ಕುಳಿತಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜುಲೈ 7ರಂದು ಬೆಳಿಗ್ಗೆ ಸುಮಾರು 10.30 ಗಂಟೆಗೆ ಮಳಲಗಾಂವ ಗ್ರಾಮದ ನಿವಾಸಿ ಸಂತೋಷ್ ಜೋಜೆ ಫರ್ನಾಂಡಿಸ್ (29) ತಮ್ಮ ಮೋಟಾರ್ ಸೈಕಲ್‌ನಲ್ಲಿ ಪಾರ್ವತಿ ಸತೀಶ ಆಗೇರ (51) ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಮಳಲಗಾಂವದಿಂದ ಶಿರಸಿ ಕಡೆಗೆ ತೆರಳುತ್ತಿದ್ದರು.

ಮಳಲಗಾಂವ ಬಸ್ ನಿಲ್ದಾಣದ ಸಮೀಪ ಸಿಮೆಂಟ್ ರಸ್ತೆಯಲ್ಲಿ ಬೈಕ್ ಅನ್ನು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಿದ ಪರಿಣಾಮ ವಾಹನ ಸ್ಕಿಡ್‌ ಆಗಿ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಪಘಾತದಲ್ಲಿ ಪಾರ್ವತಿ ಆಗೇರ ಅವರ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ಮೂಗು ಹಾಗೂ ಕಿವಿಯಿಂದ ರಕ್ತಸ್ರಾವವಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಗಾಯಾಳುವಿನ ಸಹೋದರ ಮಂಜುನಾಥ ಶಂಕರ ಆಗೇರ ನೀಡಿದ ದೂರಿನ ಮೇರೆಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಳ ಪ್ರಕರಣ ದಾಖಲಿಸಲಾಗಿದೆ

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share