Friday, July 24, 2026
Join WhatsApp Group
HomeLocal Newsಗೃಹ ಬಳಕೆ ಸಿಲಿಂಡರ್ ದುರ್ಬಳಕೆಗೆ ಬ್ರೇಕ್

ಗೃಹ ಬಳಕೆ ಸಿಲಿಂಡರ್ ದುರ್ಬಳಕೆಗೆ ಬ್ರೇಕ್

ಕಾರವಾರ: ಗೃಹ ಬಳಕೆಗೆ ನೀಡಲಾಗುವ ಎಲ್‌ಪಿಜಿ ಸಿಲಿಂಡರ್‌ಗಳನ್ನು ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್, ಬೇಕರಿ ಸೇರಿದಂತೆ ಯಾವುದೇ ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಎಚ್ಚರಿಕೆ ನೀಡಿದೆ.

ವಾಣಿಜ್ಯ ಬಳಕೆದಾರರು ಅಧಿಕೃತ ಎಲ್‌ಪಿಜಿ ಏಜೆನ್ಸಿಗಳಿಂದ ವಾಣಿಜ್ಯ ಸಿಲಿಂಡರ್ ಖರೀದಿಸಿ, ಅದರ ಬಿಲ್‌ಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಇಲಾಖೆ ತಿಳಿಸಿದೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ನಡೆಸುವ ತಪಾಸಣೆ ವೇಳೆ ಗೃಹ ಬಳಕೆಯ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿರುವುದು ಅಥವಾ ವಾಣಿಜ್ಯ ಸಿಲಿಂಡರ್ ಖರೀದಿಯ ಅಧಿಕೃತ ಬಿಲ್ ಇಲ್ಲದಿರುವುದು ಕಂಡುಬಂದರೆ, ಎಲ್‌ಪಿಜಿ ಸರಬರಾಜು ಮತ್ತು ವಿತರಣೆ ನಿಯಂತ್ರಣ ಆದೇಶ–2000ರಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.

ಇದರ ಜೊತೆಗೆ, ನಿಯಮ ಉಲ್ಲಂಘಿಸಿದ ವ್ಯಾಪಾರ ಸಂಸ್ಥೆಗಳ ಕುರಿತು ವಾಣಿಜ್ಯ ತೆರಿಗೆ ಇಲಾಖೆ, ಕಾರ್ಮಿಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ನಗರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾಹಿತಿ ನೀಡಿ, ಅವರಿಗೆ ನೀಡಿರುವ ವಾಣಿಜ್ಯ ಪರವಾನಗಿಗಳ (ಲೈಸೆನ್ಸ್) ನವೀಕರಣ ಮಾಡದಂತೆ ಶಿಫಾರಸು ಮಾಡುವುದಾಗಿ ಇಲಾಖೆ ಎಚ್ಚರಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರು ಅಥವಾ ಉತ್ತರ ಕನ್ನಡ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share