Friday, July 24, 2026
Join WhatsApp Group
HomeCrimeರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ಮಹಿಳೆ ಸಾವು

ಯಲ್ಲಾಪುರ: ತಾಲೂಕಿನ ಮಳಲಗಾಂವ ಸಮೀಪ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಜುಲೈ 7ರಂದು ಬೆಳಿಗ್ಗೆ 10.30ರ ಸುಮಾರಿಗೆ ಮಳಲಗಾಂವ ಗ್ರಾಮದ ನಿವಾಸಿ ಸಂತೋಷ ಜೋಜೆ ಫರ್ನಾಂಡಿಸ್‌ ತನ್ನ ಬೈಕ್‌ನಲ್ಲಿ ಅಕ್ಕ ಪಾರ್ವತಿ ಸತೀಶ ಆಗೇರ (51) ಅವರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಮಳಲಗಾಂವದಿಂದ ಶಿರಸಿ ಕಡೆಗೆ ತೆರಳುತ್ತಿದ್ದರು.

ಈ ವೇಳೆ ಬೈಕ್ ಅತೀವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿದ ಪರಿಣಾಮ ಮಳಲಗಾಂವ ಬಸ್ ನಿಲ್ದಾಣದ ಸಮೀಪದ ಸಿಮೆಂಟ್ ರಸ್ತೆಯಲ್ಲಿ ಸ್ಕಿಡ್ ಆಗಿ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಪಾರ್ವತಿ ಅವರ ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಮೂಗು ಮತ್ತು ಕಿವಿಯಿಂದ ರಕ್ತಸ್ರಾವ ಉಂಟಾಗಿತ್ತು. ಮೊದಲಿಗೆ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಶೇಕ್ಯುರ್ ಆಸ್ಪತ್ರೆಗೆ ಹಾಗೂ ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಜುಲೈ 9ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಪಾರ್ವತಿ ಅವರು ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share