ಕಾಲು ಜಾರಿ ಬಾವಿಗೆ ಬಿದ್ದು ಸಾ*ವು
ಕುಮಟಾ: ಮನೆ ಹಿಂಭಾಗದ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕಾಲು ಜಾರಿ ನೆಲಬಾವಿಗೆ ಬಿದ್ದ ಪರಿಣಾಮ ಪೌರೋಹಿತ್ಯ ವೃತ್ತಿಯ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಕುಮಟಾ ತಾಲೂಕಿನ ಶಿರಗುಂಜಿ-ಕತಗಾಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಗೋಪಾಲಕೃಷ್ಣ ವಿಷ್ಣು ಭಟ್ಟ (58) ಎಂದು ಗುರುತಿಸಲಾಗಿದೆ. ಅವರು ಪೌರೋಹಿತ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು.
ಜುಲೈ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ನಡುವಿನ ಅವಧಿಯಲ್ಲಿ ಗೋಪಾಲಕೃಷ್ಣ ಭಟ್ಟ ಅವರು ತಮ್ಮ ಮನೆಯ ಹಿಂಭಾಗದ ತೋಟದಲ್ಲಿ ಕೃಷಿ ಕೆಲಸಕ್ಕೆ ತೆರಳಿದ್ದರು.
ಈ ವೇಳೆ ಸುರಿದ ಭಾರಿ ಮಳೆಯಿಂದ ಬಾವಿಯಲ್ಲಿ ನೀರು ತುಂಬಿದ್ದು, ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ. ನೀರಿನಲ್ಲಿ ಮುಳುಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಮೃತರ ಪತ್ನಿ ಜಯಲಕ್ಷ್ಮೀ ಗೋಪಾಲಕೃಷ್ಣ ಭಟ್ಟ ಅವರು ನೀಡಿದ ಮಾಹಿತಿ ಆಧರಿಸಿ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಾವಿನ ಕುರಿತು ತನಿಖೆ ಕೈಗೊಳ್ಳಲಾಗಿದೆ.