Friday, July 24, 2026
Join WhatsApp Group
HomeStateಸಾಕ್ಷ್ಯ ಕೊರತೆ: ನಟರ ವಿರುದ್ಧದ ಪ್ರಕರಣಕ್ಕೆ ತೆರೆ

ಸಾಕ್ಷ್ಯ ಕೊರತೆ: ನಟರ ವಿರುದ್ಧದ ಪ್ರಕರಣಕ್ಕೆ ತೆರೆ

ಬೆಂಗಳೂರು: 2017ರಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಇಬ್ಬರು ನಟರಿಗೆ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ನಟ, ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲಾ ಮತ್ತು ನಟ ಮಂಡ್ಯ ರಮೇಶ್ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆ ರದ್ದುಪಡಿಸಲಾಗಿದೆ.

2017ರಲ್ಲಿ ಮೈಸೂರಿನ ಪಾರ್ಲರ್‌ ಒಂದರಲ್ಲಿ ಮಸಾಜ್ ಪಡೆದ ಬಳಿಕ, ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಇಬ್ಬರು ನಟರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು. ಇಬ್ಬರು ನಟರಿಗೆ ಸಮನ್ಸ್ ಜಾರಿಯಾಗಿತ್ತು.

ಪ್ರಕರಣದ ವಿಚಾರಣೆ ಮುಂದುವರಿಯುತ್ತಿದ್ದ ವೇಳೆ 2019ರಲ್ಲಿ ಹೈಕೋರ್ಟ್ ವಿಚಾರಣೆಗೆ ತಡೆ ನೀಡಿತ್ತು. ಎಫ್‌ಐಆರ್‌ನಲ್ಲಿ ಹೆಸರುಗಳಿಲ್ಲದೆ, ಆರೋಪಗಳಿಗೆ ಪೂರಕವಾದ ಸಾಕ್ಷ್ಯಾಧಾರಗಳಿಲ್ಲವೆಂದು ಸಾಧು ಕೋಕಿಲಾ ಹಾಗೂ ಮಂಡ್ಯ ರಮೇಶ್ ಪರ ಹಿರಿಯ ವಕೀಲ ಹೆಚ್.ಎಸ್. ಚಂದ್ರಮೌಳಿ ವಾದ ಮಂಡಿಸಿದ್ದರು.

ನ್ಯಾಯಮೂರ್ತಿ ಎಂ.ಜಿ. ಉಮಾ ಅವರಿದ್ದ ಹೈಕೋರ್ಟ್ ಪೀಠ, ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ಸುಮಾರು ಏಳು ವರ್ಷಗಳ ಬಳಿಕ ಪ್ರಕರಣಕ್ಕೆ ಅಂತಿಮ ತೆರೆ ಬಿದ್ದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share