Friday, July 24, 2026
Join WhatsApp Group
HomeLocal Newsಸ್ವರ್ಣವಲ್ಲೀ ಸ್ನಾನಘಟ್ಟಕ್ಕೆ ಸುಗಮ ಸಂಪರ್ಕ

ಸ್ವರ್ಣವಲ್ಲೀ ಸ್ನಾನಘಟ್ಟಕ್ಕೆ ಸುಗಮ ಸಂಪರ್ಕ

ಶಿರಸಿ: ಸ್ವರ್ಣವಲ್ಲೀ ಮಹಾಸಂಸ್ಥಾನದ ಸಮೀಪದ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ತೆರಳುವ ಭಕ್ತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಕಾಂಕ್ರೀಟ್ ಸಂಪರ್ಕ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಯಿತು.

ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಅವರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.

2025-26ನೇ ಸಾಲಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಈ ರಸ್ತೆ ನಿರ್ಮಾಣಕ್ಕೆ ₹5 ಲಕ್ಷ ಅನುದಾನ ಮಂಜೂರಾಗಿದ್ದು, ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ಅನುಷ್ಠಾನಗೊಳ್ಳಲಿದೆ.

ಈ ರಸ್ತೆ ನಿರ್ಮಾಣದಿಂದ ಶಾಲ್ಮಲಾ ನದಿ ತೀರದ ಸ್ನಾನಘಟ್ಟಕ್ಕೆ ತೆರಳುವ ಭಕ್ತರು ಹಾಗೂ ಸ್ಥಳೀಯರಿಗೆ ಸುರಕ್ಷಿತ ಮತ್ತು ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದ್ದು, ಧಾರ್ಮಿಕ ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು.

ಕಾರ್ಯಕ್ರಮದಲ್ಲಿ ಸ್ವರ್ಣವಲ್ಲೀ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ನಳ್ಳಿ, ತಾ.ಪಂ ಮಾಜಿ ಸದಸ್ಯ ನಾಗರಾಜ ಶೆಟ್ಟಿ, ಆರ್.ಎನ್. ಹೆಗಡೆ ಉಳ್ಳಿಕೊಪ್ಪ, ಸ್ಥಳೀಯ ಜಾಗೃತ ವೇದಿಕೆಯ ಪದಾಧಿಕಾರಿಗಳು, ಗ್ರಾಮಸ್ಥರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share