ಮುರ್ಡೇಶ್ವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿ ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮುರ್ಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾವಳ್ಳಿ-1 ಗ್ರಾಮ ಪಂಚಾಯಿತಿ ಗ್ರಾಮ ಸಹಾಯಕ ಬಾಬು ಶನಿಯಾರ್ ನಾಯ್ಕ ನೀಡಿದ ದೂರಿನ ಪ್ರಕಾರ, ಬುಧವಾರ ಮಧ್ಯಾಹ್ನ ಭಟ್ಕಳ ಕಡೆಯಿಂದ ಮುರ್ಡೇಶ್ವರ ಕಡೆಗೆ ಅತಿವೇಗದಲ್ಲಿ ಬರುತ್ತಿದ್ದ ಕೆಎ-01-ಎಎಚ್-4321 ಸಂಖ್ಯೆಯ ಲಾರಿ, ಕಾಯ್ಕಿಣಿ ಗ್ರಾಮ ಪಂಚಾಯಿತಿ ಕ್ರಾಸ್ ಸಮೀಪ ಮುರ್ಡೇಶ್ವರದಿಂದ ತೆರ್ನಮಕ್ಕಿ ಕಡೆಗೆ ತೆರಳುತ್ತಿದ್ದ ಕೆಎ-47-ಯು-4894 ಸಂಖ್ಯೆಯ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಸ್ಕೂಟಿ ಲಾರಿಯಡಿ ಸಿಲುಕಿದ್ದು, ಲಾರಿ ಡಿವೈಡರ್ ಮೇಲೇರಿ ನಿಂತಿದೆ. ಅಪಘಾತದಲ್ಲಿ ಸ್ಕೂಟಿ ಸವಾರ ಕೃಷ್ಣ ಅವರ ತಲೆ ಜಜ್ಜಿಹೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತಕ್ಕೆ ಲಾರಿ ಚಾಲಕನ ಅಜಾಗರೂಕ ಹಾಗೂ ಅತಿವೇಗದ ಚಾಲನೆಯೇ ಕಾರಣ ಎಂದು ಆರೋಪಿಸಿ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ