Friday, July 24, 2026
Join WhatsApp Group
HomeCrimeಬನವಾಸಿ; ಬಾಲ್‌ಪೆನ್‌ನ ಹೊಸ ವಿಳಾಸ ಪೊಲೀಸ್‌ ಠಾಣೆ!

ಬನವಾಸಿ; ಬಾಲ್‌ಪೆನ್‌ನ ಹೊಸ ವಿಳಾಸ ಪೊಲೀಸ್‌ ಠಾಣೆ!

ಬನವಾಸಿ: ಬನವಾಸಿಯ ಅಜ್ಜರಣಿ ಕ್ರಾಸ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಬನವಾಸಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ನ್ಯಾಯಾಲಯದ ಅನುಮತಿ ಪಡೆದು ದಾಳಿ ನಡೆಸಲಾಗಿದ್ದು, ಸೊರಬಾ ರಸ್ತೆಯ ನಿವಾಸಿ ದೇವರಾಜ ಚಂದ್ರಪ್ಪ ವಡ್ಡರ್ ಎಂಬಾತ ಸಾರ್ವಜನಿಕರಿಗೆ ಒಂದು ರೂಪಾಯಿಗೆ 80 ರೂಪಾಯಿಯ ಲಾಭ ನೀಡುವುದಾಗಿ ಆಮಿಷವೊಡ್ಡಿ ಹಣ ಪಡೆದು ಮಟ್ಕಾ ಜೂಜಾಟ ನಡೆಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ.

ದಾಳಿಯ ವೇಳೆ ಆರೋಪಿಯಿಂದ ಓಸಿ ಚೀಟಿ, ₹450 ನಗದು ಹಾಗೂ ಒಂದು ಬಾಲ್‌ಪೆನ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ಅನುಮತಿ ಪಡೆದು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share