Friday, July 24, 2026
Join WhatsApp Group
HomeCrimeಕಾರವಾರ | ಅಂದರ್-ಬಾಹರ್ ಆಟಕ್ಕೆ ಬ್ರೇಕ್

ಕಾರವಾರ | ಅಂದರ್-ಬಾಹರ್ ಆಟಕ್ಕೆ ಬ್ರೇಕ್

ಇಬ್ಬರು ಪೊಲೀಸರ ಬಲೆಗೆ, ಮತ್ತೋರ್ವ ಪರಾರಿ

ಕಾರವಾರ: ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್ ಇಸ್ಪೀಟ್ ಜುಗಾರಾಟ ನಡೆಸುತ್ತಿದ್ದ ಇಬ್ಬರನ್ನು ಕಾರವಾರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಮತ್ತೋರ್ವ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದಾನೆ.

ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪ ನಗರದಲ್ಲಿ ಸಾರ್ವಜನಿಕ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಗುಂಪು ಸೇರಿ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪಿಎಸ್‌ಐ ಪ್ರಮೀಲಾ ವೈ. ನಾಯ್ಕ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ವೇಳೆ ಹಬ್ಬುವಾಡ ನಿವಾಸಿಗಳಾದ ಶರಣಪ್ಪ ಪರಸಪ್ಪ ಕಬ್ಬುರಗಿ (40) ಹಾಗೂ ದ್ಯಾಮಣ್ಣ ಬಸಪ್ಪ ಗೊಣ್ಣರ (37), ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾರೆ. ದಾಳಿಯ ವೇಳೆ ಮತ್ತೋರ್ವ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾನೆ.

ಆರೋಪಿಗಳಿಂದ ಜೂಜಾಟಕ್ಕೆ ಬಳಸುತ್ತಿದ್ದ ಇಸ್ಪೀಟ್ ಎಲೆಗಳು ಹಾಗೂ ₹920 ನಗದು ವಶಪಡಿಸಿಕೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share