Friday, July 24, 2026
Join WhatsApp Group
HomeLocal Newsಗ್ಯಾರಂಟಿಗಳಿಂದ ಬಡತನ ನಿರ್ಮೂಲನೆಗೆ ನೆರವು

ಗ್ಯಾರಂಟಿಗಳಿಂದ ಬಡತನ ನಿರ್ಮೂಲನೆಗೆ ನೆರವು

ಕಾರವಾರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡತನ ನಿರ್ಮೂಲನೆಗೆ ಪರಿಣಾಮಕಾರಿಯಾಗಿ ನೆರವಾಗಿದ್ದು, ಪ್ರತಿಯೊಂದು ಕುಟುಂಬಕ್ಕೂ ಆರ್ಥಿಕ ಭದ್ರತೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದು ಕಾರವಾರ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಾಜೇಂದ್ರ ರಾಣೆ ಹೇಳಿದರು.

ಕಾರವಾರ ತಾಲೂಕಿನ ವೈಲವಾಡದಲ್ಲಿ ಭಾನುವಾರ ನಡೆದ ಗೃಹಲಕ್ಷ್ಮಿ ಯೋಜನೆಯ ಮೂರು ವರ್ಷದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿರುವುದು ಹೆಮ್ಮೆಯ ವಿಷಯ. ರಾಜ್ಯಾದ್ಯಂತ ‘ಗೃಹಲಕ್ಷ್ಮಿ ವಿಜಯೋತ್ಸವ’ ಆಚರಿಸಲಾಗುತ್ತಿದ್ದು, ಮನೆಯ ಯಜಮಾನಿಯರಿಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡುತ್ತಿರುವ ಈ ಯೋಜನೆ ಕೋಟ್ಯಂತರ ಕುಟುಂಬಗಳ ಜೀವನೋಪಾಯಕ್ಕೆ ಆಸರೆಯಾಗಿದೆ ಎಂದು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ತಮ್ಮ ದೈನಂದಿನ ಅಗತ್ಯಗಳು, ಮಕ್ಕಳ ಶಿಕ್ಷಣ ಹಾಗೂ ಸಣ್ಣಪುಟ್ಟ ಉಳಿತಾಯಗಳಿಗೆ ಹಣವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಎದುರಾದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ, ಪ್ರತಿಯೊಬ್ಬ ಅರ್ಹ ಮಹಿಳೆಗೂ ಯೋಜನೆಯ ಲಾಭ ತಲುಪಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಮೂರು ವರ್ಷದ ವಿಜಯೋತ್ಸವದ ಅಂಗವಾಗಿ ವೈಲವಾಡ, ಕಡವಾಡ, ದೇವಲಮಕ್ಕಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು. ಇದೇ ವೇಳೆ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಗಿಡ ನೆಡುವ ಕಾರ್ಯಕ್ರಮವೂ ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಶಬಾನಾ ಮುಲ್ಲಾ, ಕಾರ್ಯದರ್ಶಿ ದೇವಿದಾಸ್ ಕಾಂಬಳೆ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share