ಕಾರವಾರ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಶುಕ್ರವಾರ (ಜು.24) ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಆದೇಶದಂತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ರಜೆ ಅನ್ವಯವಾಗಲಿದೆ.