Friday, July 24, 2026
Join WhatsApp Group
HomeInformationಬೆಸ್ಕಾಂನಲ್ಲಿ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ನೇಮಕಾತಿ

ಬೆಸ್ಕಾಂನಲ್ಲಿ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ನೇಮಕಾತಿ

ಭಾಗ್ಯದ ಬಾಗಿಲು ತೆರೆದಿದೆ, ಅರ್ಹರು ಇಂದೇ ಅರ್ಜಿ ಸಲ್ಲಿಸಿ!

ಬೆಂಗಳೂರು: ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ ನಿಯಮಿತ (BESCOM) ಸಂಸ್ಥೆಯಲ್ಲಿ ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿ 2026ರ ಫೆಬ್ರವರಿ 12ರಂದು ಅಧಿಸೂಚನೆ ಪ್ರಕಟವಾಗಿದೆ.

ಈ ನೇಮಕಾತಿಯಡಿ ಒಟ್ಟು ಸುಮಾರು 520 ತರಬೇತಿ ಹುದ್ದೆಗಳು ಲಭ್ಯವಿದ್ದು, ಇವುಗಳಲ್ಲಿ BE/B.Tech (Electrical & Electronics Engineering) ಪದವೀಧರರು, ಇತರ ಇಂಜಿನಿಯರಿಂಗ್ ಪದವೀಧರರು, ಸಾಮಾನ್ಯ ಪದವಿ ಪಡೆದವರು (BA, B.Sc, B.Com, BBA, BCA, BBM) ಹಾಗೂ ಇಂಜಿನಿಯರಿಂಗ್ ಡಿಪ್ಲೊಮಾ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದ್ದು, ಪದವೀಧರರಿಗೆ ತಿಂಗಳಿಗೆ 9,008 ಮತ್ತು ಡಿಪ್ಲೊಮಾ ಪಡೆದವರಿಗೆ 8,000 ರೂ ಸ್ಟೈಪೆಂಡ್ ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆ ಶೈಕ್ಷಣಿಕ ಮೆರಿಟ್ ಆಧಾರಿತವಾಗಿದ್ದು, ಬರವಣಿಗೆ ಪರೀಕ್ಷೆ ಇರುವುದಿಲ್ಲ.

ಅಂತಿಮ ಪಟ್ಟಿಗೆ ಆಯ್ಕೆಯಾದವರು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾಗುತ್ತದೆ. ಅರ್ಜಿ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯುತ್ತಿದ್ದು, ಅಭ್ಯರ್ಥಿಗಳು National Apprenticeship Training Scheme (NATS) ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು BESCOM ಅಧಿಸೂಚನೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಮಾರ್ಚ್ ಮೊದಲ ವಾರದೊಳಗೆ ನಿಗದಿಪಡಿಸಲಾಗಿದ್ದು, ಆಸಕ್ತರು ಅಧಿಕೃತ BESCOM ವೆಬ್‌ಸೈಟ್‌ನಲ್ಲಿ ಸಂಪೂರ್ಣ ವಿವರ ಪರಿಶೀಲಿಸಿ ಸಮಯಮಿತಿಯೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share