Friday, July 24, 2026
Join WhatsApp Group
HomeLocal Newsಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಕಣ್ಣಿಡಿ

ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಕಣ್ಣಿಡಿ

ಕಾರವಾರ: ಗರ್ಭಧಾರಣಾಪೂರ್ವ ಮತ್ತು ಪ್ರಸವಪೂರ್ವ ಲಿಂಗಪತ್ತೆ ತಡೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಯಮಿತ ಹಾಗೂ ಸಮಗ್ರ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗರ್ಭಧಾರಣಾಪೂರ್ವ ಮತ್ತು ಪ್ರಸವಪೂರ್ವ ಪತ್ತೆ ತಂತ್ರವಿಧಾನಗಳ (PCPNDT) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ 82 ಸ್ಕ್ಯಾನಿಂಗ್ ಸೆಂಟರ್‌ಗಳು ನೋಂದಣಿಯಾಗಿದ್ದು, ಅಧಿಕಾರಿಗಳು ಅವುಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು. ಪರಿಶೀಲನೆ ವೇಳೆ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳು ಸಮರ್ಪಕವಾಗಿವೆಯೇ, ಗರ್ಭಧಾರಣಾಪೂರ್ವ ಅಥವಾ ಪ್ರಸವಪೂರ್ವ ಲಿಂಗಪತ್ತೆ ನಡೆಸಲಾಗುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ಸಮಗ್ರ ವರದಿ ಸಿದ್ಧಪಡಿಸಿ, ಅದನ್ನು ದೃಢೀಕರಿಸಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸ್ತ್ರೀರೋಗ ತಜ್ಞ ಡಾ. ನರೇಶ್ ಪಾವಸ್ಕರ್, ಸದಸ್ಯರಾದ ಡಾ. ಪವನಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ವಕೀಲೆ ಸುಧಾರಾಣಿ, ಸಾಮಾಜಿಕ ಕಾರ್ಯಕರ್ತೆ ಯಶೋಧಾ ಹೆಗಡೆ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ, ರೇಡಿಯಾಲಜಿಸ್ಟ್ ಡಾ. ಆಶಿತಾ ಹಾಗೂ ರೋಟರಿ ಕ್ಲಬ್‌ನ ಹೇಮಾ ಅಲ್ಫಾನ್ಸೋ ಸೇರಿದಂತೆ ಇತರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share