Saturday, July 25, 2026
Join WhatsApp Group
HomeLocal Newsಪೊಲೀಸರೂ ನಿಮ್ಮ ರೀಲ್ ನೋಡ್ತಾರೆ ಹುಷಾರು!

ಪೊಲೀಸರೂ ನಿಮ್ಮ ರೀಲ್ ನೋಡ್ತಾರೆ ಹುಷಾರು!

ಜಲಪಾತದಲ್ಲಿ ಅಪಾಯಕಾರಿ ಸಾಹಸ: ಫೇಸ್‌ಬುಕ್ ವಿಡಿಯೋ ಆಧರಿಸಿ ಐವರ ವಿರುದ್ಧ ಪ್ರಕರಣ

ಹೊನ್ನಾವರ: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಉದ್ದೇಶದಿಂದ ಅಪಾಯಕಾರಿ ಸ್ಥಳಗಳಲ್ಲಿ ಸಾಹಸ ಪ್ರದರ್ಶಿಸುವ ಪ್ರವೃತ್ತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊನ್ನಾವರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗೇರುಸೊಪ್ಪ ವಲಯದ ಅರಣ್ಯ ಪ್ರದೇಶದಲ್ಲಿರುವ ಅಪಾಯಕಾರಿ ಕನ್ನಿಕಾ ಜಲಪಾತದಂತೆಯೇ ಕಾಣುವ ಸ್ಥಳಕ್ಕೆ ಹೋಗಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಐವರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಗೇರುಸೊಪ್ಪ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಬಾಲಕೃಷ್ಣ ಈಶ್ವರ ನಾಯ್ಕ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಜುಲೈ 23ರಂದು ‘Local Maps’ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ಐವರು ಅಪರಿಚಿತರು ಶರಾವತಿ ಕಣಿವೆ ಸಂರಕ್ಷಿತ ಅರಣ್ಯ ವ್ಯಾಪ್ತಿಯಲ್ಲಿರುವ ಅಪಾಯಕಾರಿ ಕನ್ನಿಕಾ ಜಲಪಾತಕ್ಕೆ ತೆರಳಿ, ತಮ್ಮ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ಸಾಹಸ ಪ್ರದರ್ಶಿಸಿ ಅದರ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ರೀತಿಯ ಅಪಾಯಕಾರಿ ಕೃತ್ಯಗಳು ಇತರರನ್ನೂ ಪ್ರಚೋದಿಸುವ ಸಾಧ್ಯತೆ ಇರುವುದರಿಂದ, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ದೂರಿನಲ್ಲಿ ಮನವಿ ಮಾಡದ್ದು, ವಿಡಿಯೋದಲ್ಲಿರುವ ಐವರು ಅಪರಿಚಿತರ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share