Join WhatsApp Group
Ad
Home Local News ಧಾತ್ರಿ ಫೌಂಡೇಷನ್‌ನಿಂದ ವಿದ್ಯಾರ್ಥಿಗಳಿಗೆ ಪಟ್ಟಿ ವಿತರಣೆ

ಧಾತ್ರಿ ಫೌಂಡೇಷನ್‌ನಿಂದ ವಿದ್ಯಾರ್ಥಿಗಳಿಗೆ ಪಟ್ಟಿ ವಿತರಣೆ

0
11

15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ನೆರವು ಗುರಿ

ಯಲ್ಲಾಪುರ: ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಧಾತ್ರಿ ಫೌಂಡೇಷನ್ ವತಿಯಿಂದ ಪಟ್ಟಿ ವಿತರಣೆ ಕಾರ್ಯಕ್ರಮ ನಡೆಯುತ್ತಿದ್ದು, ಅದರ ಅಂಗವಾಗಿ ಸವಣಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆನಗೋಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗೋಳಿಗದ್ದೆ)ಯಲ್ಲಿ ವಿದ್ಯಾರ್ಥಿಗಳಿಗೆ ಪಟ್ಟಿ ವಿತರಿಸಲಾಯಿತು.

ಸವಣಗೇರಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸುಬ್ಬಣ್ಣ ಉದ್ದಾಬೈಲ, ಸಮಾಜದಿಂದ ನಮಗೇನು ಸಿಗುತ್ತದೆ ಎಂದು ಯೋಚಿಸುವವರೇ ಹೆಚ್ಚಿರುವ ಇಂದಿನ ಸಂದರ್ಭದಲ್ಲಿ, ಬಡತನದಿಂದಲೇ ಬೆಳೆದು ಬಂದ ಧಾತ್ರಿ ಫೌಂಡೇಷನ್‌ನ ಶ್ರೀನಿವಾಸ ಭಟ್ಟ ಅವರು ಈ ವರ್ಷ ತಾಲೂಕಿನ ಹಲವು ಶಾಲೆಗಳ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪಟ್ಟಿ ವಿತರಿಸಲು ಮುಂದಾಗಿರುವುದು ಶ್ಲಾಘನೀಯ ಕಾರ್ಯವಾಗಿದೆ. ಉಪಳೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೂ ಪಟ್ಟಿ ನೀಡುತ್ತಿರುವ ಅವರ ಸಮಾಜಮುಖಿ ಕಾರ್ಯಕ್ಕೆ ಇನ್ನಷ್ಟು ಶಕ್ತಿ ದೊರೆಯಲಿ ಎಂದು ಹಾರೈಸಿದರು.

Ad

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಾಧ್ಯಾಪಕ ಸಂಜೀವಕುಮಾರ್ ಹೊಸ್ಕೇರಿ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಕೊಂಕಣಕೊಪ್ಪ, ಶಿಕ್ಷಕರಾದ ಪೂರ್ಣಿಮಾ ನಾಯ್ಕ, ಮಾನ್ಯಾ ಆಚಾರಿ ಹಾಗೂ ಪಾಲಕರು ಉಪಸ್ಥಿತರಿದ್ದರು. ಮಾನ್ಯಾ ಆಚಾರಿ ಸ್ವಾಗತಿಸಿದರೆ, ಪೂರ್ಣಿಮಾ ನಾಯ್ಕ ವಂದಿಸಿದರು.

ಇದೇ ವೇಳೆ ಆನಗೋಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಗೋಳಿಗದ್ದೆ)ಯಲ್ಲೂ ಧಾತ್ರಿ ಫೌಂಡೇಷನ್ ವತಿಯಿಂದ ವಿದ್ಯಾರ್ಥಿಗಳಿಗೆ ಪಟ್ಟಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶಂಕರ ಹೆಗಡೆ, ಕೆ.ಟಿ. ಹೆಗಡೆ, ಗುರು ಭಟ್ಟ, ಸಿಆರ್‌ಪಿ ಚಂದ್ರಹಾಸ ನಾಯ್ಕ, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ಪಾಲಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಧಾತ್ರಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಟ್ಟ ಅವರ ಸಮಾಜಸೇವೆಯನ್ನು ಅಭಿನಂದಿಸಲಾಯಿತು.

Previous articleಸ್ವರ್ಣವಲ್ಲಿಯಲ್ಲಿ ಚಾತುರ್ಮಾಸ್ಯ ಮಹೋತ್ಸವ
Next articleಬಾಯಿಯ ಕಮಟು ವಾಸನೆ ಬಿಚ್ಚಿಟ್ಟ ಸತ್ಯ!
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!