Saturday, September 19, 2026
Join WhatsApp Group
HomeLocal Newsಶ್ರೀದತ್ತ ಮಂದಿರದಲ್ಲಿ ವಿಶೇಷ ಪೂಜೆ ಜು. 29ಕ್ಕೆ

ಶ್ರೀದತ್ತ ಮಂದಿರದಲ್ಲಿ ವಿಶೇಷ ಪೂಜೆ ಜು. 29ಕ್ಕೆ

ಯಲ್ಲಾಪುರ: ಗುರು ಪೂರ್ಣಿಮೆಯ ಅಂಗವಾಗಿ ಪಟ್ಟಣದ ನಾಯ್ಕನಕೆರೆಯ ಶ್ರೀದತ್ತ ಮಂದಿರದಲ್ಲಿ ಜುಲೈ 29ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ‘ದತ್ತವನ’ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ ಸತ್ಯದತ್ತ ವ್ರತ, ಗುರುಪಾದುಕಾ ಪೂಜೆ, ದತ್ತ ಸಹಸ್ರನಾಮದಿಂದ ತುಳಸಿ ಅರ್ಚನೆ ಹಾಗೂ ಮಾತೆಯರಿಂದ ವಿಷ್ಣು ಸಹಸ್ರನಾಮ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಮಧ್ಯಾಹ್ನ 12.30 ಗಂಟೆಗೆ ಶಾಸಕ ಶಿವರಾಮ ಹೆಬ್ಬಾರ ಅವರು ‘ದತ್ತವನ’ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀದತ್ತ ಮಂದಿರ ಸೇವಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮವತಿ ಭಟ್ಟ, ವಿಶ್ವದರ್ಶನ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಹಾಗೂ ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಭಾಗವಹಿಸಲಿದ್ದಾರೆ.

ಗುರು ಪೂರ್ಣಿಮೆಯ ಈ ಪವಿತ್ರ ಸಂದರ್ಭದಲ್ಲಿ ನಡೆಯಲಿರುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರೀ ದತ್ತಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದತ್ತನ ಕೃಪೆಗೆ ಪಾತ್ರರಾಗುವಂತೆ ಶ್ರೀದತ್ತ ಮಂದಿರ ಸೇವಾ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share