Sunday, September 6, 2026
Join WhatsApp Group
HomeInformationಶಕ್ತಿ ಯೋಜನೆಗಿನ್ನು ಆಧಾರ್‌ ನಡೆಯೊಲ್ಲ!

ಶಕ್ತಿ ಯೋಜನೆಗಿನ್ನು ಆಧಾರ್‌ ನಡೆಯೊಲ್ಲ!

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಉಚಿತ ಬಸ್ ಪ್ರಯಾಣವನ್ನು ನೀಡುವ ʻಶಕ್ತಿ ಯೋಜನೆʼ ರಾಜ್ಯದ ಮಹಿಳೆಯರಿಗೆ ವರದಾನವೇ ಆಗಿದೆ.

ಈ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಉಚಿತ ಪ್ರಯಾಣ ಮಾಡುತ್ತಾ ಹಲವಾರು ಸ್ಥಳಗಳಿಗೆ ಭೇಟಿ ನೀಡುತ್ತಿದ್ದಾರೆ. ಆದರೆ, ಇನ್ನು ಮುಂದೆ ಈ ಯೋಜನೆಯ ಪ್ರಯೋಜನ ಪಡೆಯಲು ಬಸ್‌ಗಳಲ್ಲಿ ಆಧಾರ್‌ ಕಾರ್ಡ್‌ ತೋರಿಸಿದರೆ ಆಗದು! ಅಂದರೆ, ಇನ್ನು ಮುಂದೆ ಈ ಯೋಜನೆಗೆ ಸ್ಮಾರ್ಟ್ ಕಾರ್ಡ್ ಅನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಇದುವರೆಗೂ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸುತ್ತಿದ್ದರು. ಇದೀಗ ಸರ್ಕಾರವು ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆಸಿದೆ. ಈ ವಿಧಾನ ಜಾರಿಯಾದಲ್ಲಿ, ಪ್ರಯಾಣದ ವೇಳೆ ಆಧಾರ್‌ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದು, ಶಕ್ತಿ ಯೋಜನೆಯಡಿ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲಾಗುತ್ತದೆ. ರಾಜ್ಯದ 4 ಸಾರಿಗೆ ನಿಗಮಗಳಿಂದ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯಾಗಲಿದ್ದು, ಈ ಸ್ಮಾರ್ಟ್‌ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share