ವಿದ್ಯುತ್ ಉಪಕರಣಗಳ ರಿಪೇರಿ ಕೋರ್ಸ್‌ಗೆ ಅರ್ಜಿ ಆಹ್ವಾನ
ಕುಮಟಾ: ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಕೌಶಲ್ಯ ಬೆಳೆಸಿ ಸ್ವ ಉದ್ಯೋಗದತ್ತ ಹೆಜ್ಜೆ ಇಡಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಕುಮಟಾದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI) ಆಗಸ್ಟ್ 1ರಿಂದ 31ರವರೆಗೆ ಗೃಹಬಳಕೆ ವಿದ್ಯುತ್ ಉಪಕರಣಗಳ ರಿಪೇರಿ ಕುರಿತ ಉಚಿತ ಕೌಶಲ್ಯಾಧಾರಿತ ತರಬೇತಿಯನ್ನು ಆಯೋಜಿಸಿದೆ.
ತರಬೇತಿಯಲ್ಲಿ ಮಿಕ್ಸರ್, ಗ್ರೈಂಡರ್, ಎಲೆಕ್ಟ್ರಿಕ್ ಪ್ಯಾನ್, ಪಂಪ್‌ಸೆಟ್ ಸೇರಿದಂತೆ ವಿವಿಧ ಗೃಹಬಳಕೆ ವಿದ್ಯುತ್ ಉಪಕರಣಗಳ ದುರಸ್ತಿ ಮತ್ತು ನಿರ್ವಹಣೆ ಕುರಿತು ಪ್ರಾಯೋಗಿಕ ಹಾಗೂ ತಾಂತ್ರಿಕ ಜ್ಞಾನ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನೂ ಸಂಸ್ಥೆ ಕಲ್ಪಿಸಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಕುಟುಂಬಗಳ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣಪತ್ರ ವಿತರಿಸಲಾಗುತ್ತದೆ. ಅಭ್ಯರ್ಥಿಗಳು 18ರಿಂದ 45 ವರ್ಷದೊಳಗಿನವರಾಗಿದ್ದು, ನಿರುದ್ಯೋಗಿಗಳಾಗಿರಬೇಕು ಹಾಗೂ ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ತರಬೇತಿಗೆ ಅನುಗುಣವಾದ ಕನಿಷ್ಠ ಶೈಕ್ಷಣಿಕ ಜ್ಞಾನ ಹೊಂದಿರುವುದು ಅಗತ್ಯವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸುವ ವೇಳೆ ನಾಲ್ಕು ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರಗಳು, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಪ್ಯಾನ್ ಕಾರ್ಡ್‌ನ ತಲಾ ಒಂದು ಝೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕು.
ಅರ್ಜಿಗಳನ್ನು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RSETI), ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ ಇವರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9449860007, 9538281989, 9916783825, 8880444612 ಅಥವಾ 9620962004 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.