ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಪ್ರತಿಭೆಗಳು
ಧಾರವಾಡ: ಆರ್ಕಿಟೆಕ್ಚರ್ ಕ್ಷೇತ್ರದಲ್ಲಿ ವೃತ್ತಿಜೀವನ ಕಟ್ಟಿಕೊಳ್ಳಲು ಮಹತ್ವದ ಹೆಜ್ಜೆಯಾಗಿರುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯಲ್ಲಿ ಧಾರವಾಡದ ಅರ್ಜುನ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (Council of Architecture) ನಡೆಸುವ ಐದು ವರ್ಷಗಳ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (B.Arch) ಪದವಿ ಪ್ರವೇಶ ಪರೀಕ್ಷೆಯಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ರ್ಯಾಂಕಿಂಗ್ ಪಡೆದು ತಮ್ಮ ಪ್ರತಿಭೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ಸಾಬೀತುಪಡಿಸಿದ್ದಾರೆ.
ಸಾಧನೆಗೈದ ವಿದ್ಯಾರ್ಥಿಗಳ ಪೈಕಿ ಸ್ವರ್ಣ ಶೆಟ್ಟಮ್ಮನವರ 105ನೇ ಸ್ಥಾನ, ಶ್ರೇಯಾ ಪಾಟೀಲ 109ನೇ ಸ್ಥಾನ ಹಾಗೂ ಈಶಾಲ್ ಮುಲ್ಲಾ 295ನೇ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಭ್ಯಾಸ ಹಾಗೂ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ JEE, NEET ಮತ್ತು KCET ಸೇರಿದಂತೆ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿರುವ ಅರ್ಜುನ ಸಂಸ್ಥೆಯ ವಿದ್ಯಾರ್ಥಿಗಳು, ಇದೀಗ NATA ಪರೀಕ್ಷೆಯಲ್ಲಿಯೂ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಶೈಕ್ಷಣಿಕ ಹಾಗೂ ವೃತ್ತಿಜೀವನ ಉಜ್ವಲವಾಗಿರಲೆಂದು ಶುಭ ಹಾರೈಸಿದ್ದಾರೆ.