ಕಾರವಾರ: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗ ಆರಂಭಿಸಲು ನೆರವಾಗುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ‘ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ’ ಅಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಯೋಜನೆಯಡಿ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಮತ್ತು ಕ್ಯಾಟರಿಂಗ್ ಉದ್ಯಮ, ಅಂಗಡಿ, ಟೈಲರಿಂಗ್, ಟ್ಯಾಕ್ಸಿ ಸೇವೆ, ಹಸು ಸಾಕಾಣಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ಫಲಾನುಭವಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಮಂಡಳಿ ಮನವಿ ಮಾಡಿದೆ.
ಯೋಜನೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಹಾಗೂ ದಿವ್ಯಾಂಗರಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
ಆಸಕ್ತರು ಆಗಸ್ಟ್ 31ರ ಸಂಜೆ 5.30 ಗಂಟೆಯೊಳಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ, ನ್ಯೂ ಕೆಎಚ್ಬಿ ಕಾಲೋನಿ, ಹಬ್ಬುವಾಡ, ಕಾರವಾರ ಸಂಪರ್ಕಿಸಬಹುದು. ಅಲ್ಲದೆ 7975633671 ದೂರವಾಣಿ ಸಂಖ್ಯೆಯಲ್ಲಿಯೂ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.