Friday, July 24, 2026
Join WhatsApp Group
HomeStateನಕಲಿ ಬ್ಯಾಂಕ್‌ ಸೀಲ್;‌ ತೆರಿಗೆ ಪಾವತಿಯಲ್ಲಿ ವಂಚನೆ!

ನಕಲಿ ಬ್ಯಾಂಕ್‌ ಸೀಲ್;‌ ತೆರಿಗೆ ಪಾವತಿಯಲ್ಲಿ ವಂಚನೆ!

ಉಡುಪಿ: ಉಡುಪಿ ನಗರಸಭೆಯಲ್ಲಿ ಆಸ್ತಿತೆರಿಗೆ ಪಾವತಿಯಲ್ಲಿ ನಡೆದಿರುವ ವಂಚನೆ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಪೌರಾಯುಕ್ತರು ನೀಡಿದ ದೂರಿನ ಪ್ರಕಾರ, ನಗರಸಭೆ ಕಚೇರಿಯಲ್ಲಿ ಆಸ್ತಿತೆರಿಗೆ ಪಾವತಿಯನ್ನು ಇ-ಸ್ವೀಕೃತಿ ಮೂಲಕ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್‌ನ ನಗರಸಭೆಯ ಖಾತೆಗೆ ಜಮಾ ಮಾಡುವ ವ್ಯವಸ್ಥೆ ಇದೆ. ಫೆಬ್ರವರಿ 3ರಂದು ಪಾವತಿ ವಿವರಗಳ ಪರಿಶೀಲನೆ ವೇಳೆ, ಜನವರಿ 28ರಂದು ಪಾವತಿಯಾಗಿದೆಯೆಂದು ಬ್ಯಾಂಕ್ ಸೀಲ್ ಹೊಂದಿದ್ದ ಚಲನ್ ಪತ್ತೆಯಾದರೂ, ಅದೇ ದಿನಾಂಕದ ಬ್ಯಾಂಕ್ ವಿವರ ಪಟ್ಟಿಯಲ್ಲಿ ಆ ಪಾವತಿ ದಾಖಲಾಗಿರಲಿಲ್ಲ ಎಂಬುದು ಗಮನಕ್ಕೆ ಬಂದಿದೆ.

ಹಾಗೆಯೇ, ಫೆ. 4ರಂದು ಮತ್ತಷ್ಟು ಪರಿಶೀಲನೆ ನಡೆಸಿದಾಗ, ಬ್ಯಾಂಕ್ ಸೀಲ್ ಹೊಂದಿದ್ದ ಕೆಲವು ಚಲನ್‌ಗಳು ಈಗಾಗಲೇ ಜನವರಿ 28ರಂದು ಜನರೇಟ್ ಆಗಿದ್ದ ಅದೇ ಚಲನ್ ಸಂಖ್ಯೆಯನ್ನು ಹೊಂದಿರುವುದು ಪತ್ತೆಯಾಗಿದೆ. ಒಂದೇ ಚಲನ್ ಸಂಖ್ಯೆಗೆ ಎರಡು ಬೇರೆ ದಿನಾಂಕಗಳಲ್ಲಿ ಸೀಲ್ ಹೊಂದಿದ ಚಲನ್‌ಗಳು ದೊರೆತಿರುವುದು ಅನುಮಾನಕ್ಕೆ ಕಾರಣವಾಗಿದೆ.

ಯಾರೋ ಆರೋಪಿಗಳು ಬ್ಯಾಂಕ್ ಸೀಲ್ ದುರ್ಬಳಕೆ ಮಾಡಿ ಆಸ್ತಿತೆರಿಗೆ ಪಾವತಿಸಿದ ಹಣವನ್ನು ವಂಚನೆ ಮಾಡಿರುವ ಶಂಕೆಯ ಮೇರೆಗೆ ಉಡುಪಿ ನಗರ ಠಾಣೆಯಲ್ಲಿ ಅಪರಾಧ ಸಂಖ್ಯೆ 207/2025ರಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ವೇಳೆ ಓರ್ವ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share