Monday, September 7, 2026
Join WhatsApp Group
HomeLocal News41 ವರ್ಷಗಳ ಶಿಕ್ಷಕ ಜೀವನಕ್ಕೆ ವಿದಾಯ

41 ವರ್ಷಗಳ ಶಿಕ್ಷಕ ಜೀವನಕ್ಕೆ ವಿದಾಯ

ಮಂಗಲಾ ಗಾಂವ್ಕರ್‌ಗೆ ಭಾವಪೂರ್ಣ ಬೀಳ್ಕೊಡುಗೆ

ಅಂಕೋಲಾ: 41 ವರ್ಷಗಳ ಸುದೀರ್ಘ ಶಿಕ್ಷಕ ಸೇವೆ ಪೂರ್ಣಗೊಳಿಸಿ ನಿವೃತ್ತರಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೇಶ್ವರದ ಮುಖ್ಯ ಶಿಕ್ಷಕಿ ಮಂಗಲಾ ಗಾಂವ್ಕರ್ ಅವರಿಗೆ ಶುಕ್ರವಾರ ಶಾಲೆಯಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಂಕೋಲಾ ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ನಾಯಕ, ಶಿಕ್ಷಕರಾಗಿ ಸೇವೆ ಸಲ್ಲಿಸುವ ಅವಕಾಶವೇ ಒಂದು ಸೌಭಾಗ್ಯ. ಮಂಗಲಾ ಗಾಂವ್ಕರ್ ಅವರು ತಮ್ಮ 41 ವರ್ಷಗಳ ಸೇವೆಯನ್ನು ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ನಿರ್ವಹಿಸಿ ಆದರ್ಶ ಶಿಕ್ಷಕಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಅಭಿನಂದಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿ.ಎಸ್. ಭಟ್ಟ ಕಲ್ಲೇಶ್ವರ ಮಾತನಾಡಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಮಂಗಲಾ ಗಾಂವ್ಕರ್ ಅವರು ಶಾಲೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿವೃತ್ತಿ ಜೀವನ ಸುಖ, ಆರೋಗ್ಯ, ಸಂತೋಷ ಹಾಗೂ ಸಮೃದ್ಧಿಯಿಂದ ಕೂಡಿರಲಿ ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿದ ಮಂಗಲಾ ಗಾಂವ್ಕರ್ ಅವರು ತಮ್ಮ 41 ವರ್ಷಗಳ ಸೇವಾ ಅವಧಿಯಲ್ಲಿ ಸಹಕರಿಸಿದ ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಂಗಲಾ ಗಾಂವ್ಕರ್ ಅವರ ಕುಟುಂಬದ ಸದಸ್ಯ ನಾಗೇಶ ನಾಯಕ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಪಾರ್ವತಿ ನಾಯಕ, ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆ ಸ್ಮಿತಾ ಭಟ್ಟ, ಶಾಲೆಯ ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿಕ್ಷಕ ಅಬ್ದುಲ್ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಮೈನಾ ಗುನಗಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಅಕ್ಷಯಾ ಗುನಗಾ ವಂದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share