Monday, September 7, 2026
Join WhatsApp Group
HomeLocal Newsಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ

ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆ ಯಶಸ್ವಿ

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಭಾನುವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಯಾವುದೇ ಗೊಂದಲ ಅಥವಾ ಅಹಿತಕರ ಘಟನೆಗಳಿಲ್ಲದೆ ಸುಗಮ ಹಾಗೂ ಶಾಂತಿಯುತವಾಗಿ ನೆರವೇರಿತು.

ಪರೀಕ್ಷೆಗಾಗಿ ಕಾರವಾರದಲ್ಲಿ 15 ಹಾಗೂ ಅಂಕೋಲಾದಲ್ಲಿ 5 ಸೇರಿದಂತೆ ಒಟ್ಟು 20 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಒಟ್ಟು 6,475 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ 5,783 ಮಂದಿ ಪರೀಕ್ಷೆಗೆ ಹಾಜರಾಗಿದ್ದರೆ, 692 ಅಭ್ಯರ್ಥಿಗಳು ಗೈರಾಗಿದ್ದರು.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹಾಗೂ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಅಭ್ಯರ್ಥಿಗಳಿಗೆ ಕಲ್ಪಿಸಲಾಗಿದ್ದ ಸೌಲಭ್ಯಗಳು, ಭದ್ರತಾ ವ್ಯವಸ್ಥೆ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು ಹಾಗೂ ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯನ್ನು ಪರಿಶೀಲಿಸಿದರು.

ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿತ್ತು. ನಕಲು ಹಾಗೂ ಇತರ ಅಕ್ರಮಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಾಗದಂತೆ ಪರೀಕ್ಷಾ ಕೇಂದ್ರಗಳಲ್ಲಿ ಮಾಹಿತಿ ಮತ್ತು ಸೂಚನಾ ಫಲಕಗಳನ್ನು ಅಳವಡಿಸಲಾಗಿದ್ದು, ಕೇಂದ್ರಗಳ ಸುತ್ತಮುತ್ತ ಹಾಗೂ ಮಾರ್ಗಾಧಿಕಾರಿಗಳ ತಂಡಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನೂ ಒದಗಿಸಲಾಗಿತ್ತು.

ಒಟ್ಟಾರೆಯಾಗಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿದ್ದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಅತ್ಯಂತ ಸುವ್ಯವಸ್ಥಿತ, ಪಾರದರ್ಶಕ ಹಾಗೂ ಶಾಂತಿಯುತ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share