ಕಾರವಾರ: ಪ್ರಧಾನಮಂತ್ರಿ ಫಸಲ್ ಬಿಮಾ (ಬೆಳೆ ವಿಮೆ) ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.
ಜಿಲ್ಲೆಯಲ್ಲಿ ಇಫ್ಕೊ ಟೋಕಿಯೊ ಜನರಲ್ ಇನ್ಶೂರೆನ್ಸ್ ಕಂಪನಿ ಮೂಲಕ ಭತ್ತ, ಮುಸುಕಿನ ಜೋಳ ಹಾಗೂ ಹತ್ತಿ ಬೆಳೆಗಳಿಗೆ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಕೃಷಿ ಇಲಾಖೆ ಪ್ರಕಟಿಸಿರುವ ಮಾಹಿತಿಯಂತೆ, ಮೆಕ್ಕೆಜೋಳ ಹಾಗೂ ಹತ್ತಿ ಬೆಳೆಗಳಿಗೆ ಬೆಳೆಸಾಲ ಪಡೆದ ರೈತರು ಮಾತ್ರ ತಮ್ಮ ಬೆಳೆ ವಿಮೆಯನ್ನು ಆಗಸ್ಟ್ 7ರವರೆಗೆ ನೋಂದಾಯಿಸಿಕೊಳ್ಳಬಹುದು.
ಇನ್ನು ಭತ್ತ ಬೆಳೆಗೆ ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರು ಇಬ್ಬರೂ ಆಗಸ್ಟ್ 14ರವರೆಗೆ ಬೆಳೆ ವಿಮೆ ನೋಂದಾಯಿಸಲು ಅವಕಾಶವಿದೆ.
ವಿಮೆ ನೋಂದಣಿಗೆ ಫ್ರೂಟ್ಸ್ ಐಡಿ (FRUITS ID), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಪ್ರತಿ ಹಾಗೂ ಪಹಣಿ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ರಾಷ್ಟ್ರೀಕೃತ ಬ್ಯಾಂಕ್ಗಳು, ವ್ಯವಸಾಯ ಸೇವಾ ಸಹಕಾರಿ ಸಂಘಗಳು, ಸಾಮಾನ್ಯ ಸೇವಾ ಕೇಂದ್ರ (CSC), ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ ಟೋಲ್ಫ್ರೀ ಸಂಖ್ಯೆ 1800 103 5490ಕ್ಕೆ ಕರೆ ಮಾಡಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.