Monday, September 7, 2026
Join WhatsApp Group
HomeLocal Newsಉತ್ತರ ಕನ್ನಡಕ್ಕಿಲ್ಲ ಸಚಿವ ಸ್ಥಾನ; ಕಾಂಗ್ರೆಸ್‌ನಿಂದ ಅವಮಾನ!

ಉತ್ತರ ಕನ್ನಡಕ್ಕಿಲ್ಲ ಸಚಿವ ಸ್ಥಾನ; ಕಾಂಗ್ರೆಸ್‌ನಿಂದ ಅವಮಾನ!

ಶಿರಸಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಮೂಲಕ ಕಾಂಗ್ರೆಸ್ ಸರ್ಕಾರ ಜಿಲ್ಲೆಯ ಜನತೆಗೆ ಅನ್ಯಾಯ ಮಾಡಿದ್ದು, ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ ಎಂದು ಬಿಜೆಪಿ ರೈತ ಮೋರ್ಚಾ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಮಂಕಾಳು ವೈದ್ಯರಿಗೆ ಸಚಿವ ಸ್ಥಾನ ಎಂದು ಅಧಿಕೃತವಾಗಿ ಪ್ರಕಟಿಸಿ, ಕೊನೆಯ ಕ್ಷಣದಲ್ಲಿ ಅವರನ್ನು ಕೈಬಿಟ್ಟಿರುವುದು ಅವಮಾನಕರ ನಡೆ ಎಂದು ಟೀಕಿಸಿದ್ದಾರೆ.

ನಂತರ “ಎಸ್.ಎಸ್. ಮಲ್ಲಿಕಾರ್ಜುನ್ ಅವರ ಹೆಸರಿನ ಬದಲಿಗೆ ಮುದ್ರಣ ದೋಷದಿಂದ ಮಂಕಾಳು ವೈದ್ಯರ ಹೆಸರು ಪ್ರಕಟವಾಗಿದೆ” ಎಂಬ ಕಾಂಗ್ರೆಸ್ ಹೈಕಮಾಂಡ್‌ನ ಸ್ಪಷ್ಟೀಕರಣ ಹಾಸ್ಯಾಸ್ಪದವಾಗಿದೆ ಎಂದು ಅವರು ಹೇಳಿದ್ದಾರೆ.

ಕಲಬುರಗಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳನ್ನು ನೀಡಿರುವ ಸರ್ಕಾರ, ಭೌಗೋಳಿಕವಾಗಿ ವಿಶಾಲವಾದ ಉತ್ತರ ಕನ್ನಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನವನ್ನೂ ನೀಡದಿರುವುದು ಜಿಲ್ಲೆಯ ಜನತೆ ಹಾಗೂ ಹಿಂದುಳಿದ ವರ್ಗಗಳ ವಿರುದ್ಧದ ತಾರತಮ್ಯವಾಗಿದೆ ಎಂದು ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ಪ್ರಕೃತಿ ವಿಕೋಪಗಳು ಎದುರಾಗುವ ಉತ್ತರ ಕನ್ನಡ ಜಿಲ್ಲೆಯಂತಹ ಪ್ರದೇಶಕ್ಕೆ ಸಚಿವರೇ ಇಲ್ಲದಿರುವುದು ಗಂಭೀರ ಸಮಸ್ಯೆಯಾಗಲಿದೆ. ಕೈಗಾ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಬೇಡ್ತಿ–ಅಘನಾಶಿನಿ ನದಿ ಜೋಡಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳಿಗೆ ಸರ್ಕಾರ ಸೂಕ್ತ ಗಮನ ಹರಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.

ಜಿಲ್ಲೆಗೆ ಉಸ್ತುವಾರಿ ಸಚಿವರನ್ನೂ ನೇಮಿಸದಿರುವುದು ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಜನರು ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಆಧಾರದ ಮೇಲೆ ಜಿಲ್ಲೆಯ ನಾಲ್ವರು ಶಾಸಕರು ಆಯ್ಕೆಯಾಗಿದ್ದರೂ, ಜಿಲ್ಲೆಗೆ ಸಚಿವ ಸ್ಥಾನ ನೀಡದಿರುವ ಮೂಲಕ ಸಣ್ಣ ಸಮುದಾಯ ಹಾಗೂ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share