Monday, September 7, 2026
Join WhatsApp Group
HomeLocal Newsಟ್ರ್ಯಾಕ್ಟರ್ ಏರಿದ ನಾಗರಾಜ!

ಟ್ರ್ಯಾಕ್ಟರ್ ಏರಿದ ನಾಗರಾಜ!

ಶಿರಸಿ: ತಾಲೂಕಿನ ಬನವಾಸಿ ವಲಯದ ಎಕ್ಕಂಬಿ ಶಾಖೆಯ ಹೆಬ್ಬಳ್ಳಿ ಗ್ರಾಮದಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನ ಬಾನೆಟ್ ಒಳಗೆ ನಾಗರಹಾವು ಸೇರಿಕೊಂಡ ಘಟನೆ ನಡೆದಿದೆ. ಸಮಯೋಚಿತವಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರಿಂದ ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಕಾಡಿಗೆ ಬಿಡಲಾಗಿದೆ.

ಹೆಬ್ಬಳ್ಳಿ ಗ್ರಾಮದ ನಾಗರಾಜ್ ನಾಯ್ಕ ಅವರ ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನ ಬಾನೆಟ್ ಒಳಗೆ ನಾಗರಹಾವು ಸೇರಿರುವುದನ್ನು ಗಮನಿಸಿದ ಪರಶುರಾಮ ಧರ್ಮ ನಾಯ್ಕ ಅವರು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಪಾಳಾ ಉಪ ವಲಯ ಅರಣ್ಯಾಧಿಕಾರಿ ಸುನೀಲ್ ಹೊನ್ನಾವರ ಸ್ಥಳಕ್ಕೆ ಆಗಮಿಸಿ, ಎಚ್ಚರಿಕೆಯಿಂದ ಟ್ರ್ಯಾಕ್ಟರ್ ಬಾನೆಟ್ ಒಳಗಿದ್ದ ನಾಗರಹಾವನ್ನು ಸುರಕ್ಷಿತವಾಗಿ ಹೊರತೆಗೆದು ಸೆರೆಹಿಡಿದರು. ಬಳಿಕ ಹಾವನ್ನು ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟು ಮಾನವ–ವನ್ಯಜೀವಿ ಸಂಘರ್ಷವನ್ನು ತಪ್ಪಿಸಿದರು.

ಕಾರ್ಯಾಚರಣೆಯಲ್ಲಿ ವಿರೂಪಾಕ್ಷ, ಪ್ರದೀಪ್ ನಾಯ್ಕ, ಪರಶುರಾಮ್ ಹಾಗೂ ನಾಗರಾಜ್ ನಾಯ್ಕ ಸಹಕರಿಸಿದರು.

ಈ ವೇಳೆ ಅರಣ್ಯ ಇಲಾಖೆ, ‘ಹಾವಿನ ಬಗ್ಗೆ ಅನಗತ್ಯ ಭಯ ಬೇಡ, ಆದರೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಜಾಗ್ರತೆ ಅಗತ್ಯ’ ಎಂದು ಸಾರ್ವಜನಿಕರಿಗೆ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share