Friday, July 24, 2026
Join WhatsApp Group
HomeStateಬ್ರಾಹ್ಮಣರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ

ಬ್ರಾಹ್ಮಣರನ್ನು ಅವಮಾನಿಸುವ ಉದ್ದೇಶ ಇರಲಿಲ್ಲ

ಶಿವಮೊಗ್ಗ: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಆಡಿದ ಮಾತುಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಕಾವೇರುತ್ತಿದ್ದಂತೆ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ವಿಷಾದ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇತ್ತೀಚೆಗೆ ಹೊನ್ನಾವರ ತಾಲೂಕಿನಲ್ಲಿ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಆಡಿದ ನನ್ನ ಮಾತುಗಳಲ್ಲಿ ಯಾವುದೇ ಸಮುದಾಯವನ್ನು ಅವಹೇಳನ ಮಾಡುವ ಉದ್ದೇಶ ಇರಲಿಲ್ಲ. ಒಂದು ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ ಸಂದರ್ಭದಲ್ಲಿ ನಾನು ಕಟ್ಟಿದ ದೇವಸ್ಥಾನದಲ್ಲಿ ಕೆಲವು ವ್ಯಕ್ತಿಗಳಿಂದ ಆದ ನೋವನ್ನು ನಮ್ಮ ಅಡು ಭಾಷೆಯಲ್ಲಿ ವ್ಯಕ್ತಪಡಿಸಿದ್ದೆನಷ್ಟೆ ಎಂದು ಹೇಳಿದ್ದಾರೆ.

ನಾನು ಆಡಿದಂತ ಮಾತಿನಿಂದ ಯಾವುದೇ ಸಮುದಾಯಕ್ಕೆ ನೋವಾಗಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ವಿಶೇಷವಾಗಿ ಬ್ರಾಹ್ಮಣ ಸಮುದಾಯದ ಮೇಲೆ ನನಗೆ ಮೊದಲಿನಿಂದಲೂ ಅಪಾರವಾದ ಗೌರವ ಇದೆ ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share