Monday, September 7, 2026
Join WhatsApp Group
HomeLocal Newsಮಳೆ ನೋಡಿ ಸಚಿವರಿಗೂ ನೆನಪಾಯ್ತು ಉತ್ತರ ಕನ್ನಡ!

ಮಳೆ ನೋಡಿ ಸಚಿವರಿಗೂ ನೆನಪಾಯ್ತು ಉತ್ತರ ಕನ್ನಡ!

ಉತ್ತರ ಕನ್ನಡಕ್ಕೆ ಭೇಟಿ ನೀಡಲಿದ್ದಾರೆ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಪರಿಶೀಲಿಸಲು ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ಆಗಸ್ಟ್‌ 6 ಮತ್ತು 7ರಂದು ಪ್ರವಾಸ ಕೈಗೊಳ್ಳಲಿದ್ದಾರೆ.

ಜಿಲ್ಲೆಯ ಎಲ್ಲಾ ಪ್ರಮುಖ ತಾಲೂಕುಗಳಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವುದರ ಜೊತೆಗೆ, ಮಳೆ ಹಾನಿಗೊಳಗಾದ ಆಯ್ದ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಆಗಸ್ಟ್‌ 6ರಂದು ಬೆಳಿಗ್ಗೆ 11 ಗಂಟೆಗೆ ಕಾರವಾರದ ಲೋಕೋಪಯೋಗಿ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಪ್ರಾಥಮಿಕ ಚರ್ಚೆ ನಡೆಸಲಿದ್ದು, ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಕುರಿತ ಜಿಲ್ಲಾಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಬಳಿಕ ಮಧ್ಯಾಹ್ನ 3 ಗಂಟೆಗೆ ಅಂಕೋಲಾ ತಾಲೂಕಿನ ಮಳೆ ಹಾನಿಗೊಳಗಾದ ಆಯ್ದ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಹೊನ್ನಾವರ ಲೋಕೋಪಯೋಗಿ ಪರಿವೀಕ್ಷಣಾ ಮಂದಿರದಲ್ಲಿ ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಲಿದ್ದಾರೆ.

ಆಗಸ್ಟ್‌ 7ರಂದು ಬೆಳಿಗ್ಗೆ 10.30ಕ್ಕೆ ಶಿರಸಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಶಿರಸಿ ಮತ್ತು ಸಿದ್ದಾಪುರ ತಾಲೂಕಿನ ಪರಿಸ್ಥಿತಿ ಕುರಿತು ಸಭೆ ನಡೆಸಲಿದ್ದಾರೆ. 11.30ಕ್ಕೆ ಶಿರಸಿ ತಾಲೂಕಿನ ಹಾಗೂ ಮಧ್ಯಾಹ್ನ 1 ಗಂಟೆಗೆ ಬನವಾಸಿ ಭಾಗದ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಮುಂಡಗೋಡ ಲೋಕೋಪಯೋಗಿ ಪರಿವೀಕ್ಷಣಾ ಮಂದಿರದಲ್ಲಿ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕಿನ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಆಯ್ದ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ನಂತರ ಸಂಜೆ 4.30ಕ್ಕೆ ಹಳಿಯಾಳ ಪುರಭವನದಲ್ಲಿ ಹಳಿಯಾಳ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಅತಿವೃಷ್ಟಿ ಮತ್ತು ಅನಾವೃಷ್ಟಿ ಕುರಿತು ಸಭೆ ನಡೆಸಿ, ಸಂಬಂಧಿಸಿದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಮಳೆ ಹಾನಿ, ಪರಿಹಾರ ಕಾಮಗಾರಿಗಳ ಪ್ರಗತಿ ಹಾಗೂ ರೈತರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ನಿರ್ದೇಶನಗಳನ್ನು ಸಚಿವರು ನೀಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share