Friday, July 24, 2026
Join WhatsApp Group
HomeLocal Newsಬಿಲ್ಲಿಗದ್ದೆಯಲ್ಲಿ ಮಹಾಶಿವರಾತ್ರಿ ನಿಮಿತ್ತ ವಿಶೇಷ ಪೂಜೆ

ಬಿಲ್ಲಿಗದ್ದೆಯಲ್ಲಿ ಮಹಾಶಿವರಾತ್ರಿ ನಿಮಿತ್ತ ವಿಶೇಷ ಪೂಜೆ

ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಚಂದಗುಳಿ ಗ್ರಾಮದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಬಿಲ್ಲಿಗದ್ದೆಯಲ್ಲಿ ಮಹಾಶಿವರಾತ್ರಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನಡೆದವು. ಬೆಳಿಗ್ಗೆಯಿಂದಲೇ ಸುತ್ತಮುತ್ತಲಿನ ಗ್ರಾಮಗಳ ಭಕ್ತಾದಿಗಳು ಶ್ರೀ ರಾಮಲಿಂಗೆಶ್ವರ ದೇವರಿಗೆ ಪೂಜೆ ಸಲ್ಲಿಸಿದರು.

ಸಂಜೆ ಹಲಸ್ಕಂಡ ಗ್ರಾಮದ ಮಾತೆಯರಿಂದ ಭಜನೆ, ಸುಮಾ ತೊಂಡೆಕೆರೆ ತಂಡದಿಂದ ಭರತನಾಟ್ಯ ಕಾರ್ಯಕ್ರಮ ಜರುಗಿತು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವೇ.ಮೂ ವಿಶ್ವನಾಥ ಭಟ್ಟ ಬೆಳಖಂಡ ದಂಪತಿಗಳನ್ನು, ಯಾವುದೇ ಪ್ರತಿಫಲಾಫೇಕ್ಷೆ ಇಲ್ಲದೆ ವರ್ಷಪೂರ್ತಿ ಶ್ರೀದೇವರಿಗೆ ನಿತ್ಯ ಪೂಜೆ ಸಲ್ಲಿಸುವ ಕವಾಳೆ ಭಾಗ್ವತ ಕುಟುಂಬದವರನ್ನು ದೇವಸ್ಥಾನ ಕಮಿಟಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ದೇವಸ್ಥಾನ ಕಮಿಟಿ ಅದ್ಯಕ್ಷ ಎಲ್.ಪಿ.ಭಟ್ಟ ಭಟ್ಟ ಗುಂಡ್ಕಲ್ ಅಧ್ಯಕ್ಷತೆ  ವಹಿಸಿದ್ದರು. ಎಲ್‌ಎಸ್‌ಎಂಪಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಉಪಾಧ್ಯಕ್ಷ ಟಿ.ಆರ್. ಹೆಗಡೆ, ಚಂದಗುಳಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಲಕ್ಷ್ಮೀನಾರಾಯಣ ಭಟ್ಟ ತಾರಿಮಕ್ಕಿ , ಪ್ರಮುಖರಾದ ಸುಬ್ಬಣ್ಣ ಉದ್ದಾಬೈಲ, ನರಸಿಂಹ ಭಟ್ಟ ಗುಂಡ್ಕಲ್‌, ದೇವಸ್ಥಾನ ಕಮಿಟಿಯ ರಾಮಚಂದ್ರ ಭಟ್ಟ ಬಿಲ್ಲಿಗದ್ದೆ, ಶಾರದಾ ಭಾಗ್ವತ ಗುಂಡ್ಕಲ್ ಉಪಸ್ಥಿತರಿದ್ದರು.

ಸುಬ್ರಾಯ ಭಟ್ಟ ಗುಂಡ್ಕಲ್ ಸ್ವಾಗತಿಸಿ ಸಭೆಯನ್ನು ನಿರ್ವಹಿಸಿದರು. ಸುಬ್ರಹ್ಮಣ್ಯ ಭಟ್ಟ ಗುಂಡ್ಕಲ್ ವಂದಿಸಿದರು. ನಂತರ, ಶ್ರೀ ರಾಮಲಿಂಗೇಶ್ವರ ಯಕ್ಷಗಾನ ಬಳಗ ಬಿಲ್ಲಿಗದ್ದೆ ಇವರಿಂದ ಯಕ್ಷಗಾನ ಪ್ರದರ್ಶನ ಜರುಗಿತು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share