ಅಂಕೋಲಾ: ಮನೆಯಲ್ಲಿ ಕುರ್ಚಿಯಿಂದ ಎದ್ದೇಳುವಾಗ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟ ಘಟನೆ ತಾಲೂಕಿನ ತೆಂಕಣಕೇರಿಯಲ್ಲಿ ನಡೆದಿದೆ.
ಮೃತರನ್ನು ತೆಂಕಣಕೇರಿಯ ನಿವಾಸಿ ರೇವತಿ ನಾಯ್ಕ (58) ಎಂದು ಗುರುತಿಸಲಾಗಿದೆ.
ರೇವತಿ ಅವರು ಕಳೆದ ಸುಮಾರು 15 ವರ್ಷಗಳಿಂದ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದರು. ಆಗಸ್ಟ್ 10ರಂದು ರಾತ್ರಿ 8 ಗಂಟೆ ಸುಮಾರಿಗೆ ಮನೆಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ ಅವರು ಎದ್ದೇಳುವ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ತಲೆ ಟಿಪಾಯಿಗೆ ಬಡಿದು ಗಾಯಗೊಂಡಿದ್ದರು.
ತಕ್ಷಣ ಅವರನ್ನು ಅಂಕೋಲಾದ ಆರ್ಯ ಮೆಡಿಕಲ್ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್. ಹೆಗಡೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಗಸ್ಟ್ 17ರಂದು ಬೆಳಿಗ್ಗೆ 10.34ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.