Monday, September 7, 2026
Join WhatsApp Group
HomeCrimeಹೊನ್ನಾವರ | ಗಾಂಜಾ ಮಾರಾಟಕ್ಕೆ ಯತ್ನಿಸಿದ ಮೂವರ ವಿರುದ್ಧ ಪ್ರಕರಣ

ಹೊನ್ನಾವರ | ಗಾಂಜಾ ಮಾರಾಟಕ್ಕೆ ಯತ್ನಿಸಿದ ಮೂವರ ವಿರುದ್ಧ ಪ್ರಕರಣ

ಹೊನ್ನಾವರ: ಪಟ್ಟಣದ ಬಂದರು ರಸ್ತೆಯ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಹೊನ್ನಾವರ ಪೊಲೀಸರು ಓರ್ವನನ್ನು ವಶಕ್ಕೆ ಪಡೆದಿದ್ದು, ಆತನಿಂದ 116 ಗ್ರಾಂ ಗಾಂಜಾವನ್ನು ಜಪ್ತು ಮಾಡಿದ್ದಾರೆ.

ಹೊನ್ನಾವರ ನಗರದ ಮಹಾಲಕ್ಷ್ಮೀ ಗ್ಯಾಸ್‌ ಗೋಡೌನ್‌ ಸಮೀಪದ ಬಂದರು ರಸ್ತೆಯ ಬದಿಯಲ್ಲಿ ಆಗಸ್ಟ್‌ 18ರಂದು ಸಂಜೆ ಸುಮಾರು 6 ಗಂಟೆ ವೇಳೆಗೆ ಟೊಂಕಾ-2, ಕಾಸರಕೋಡ ನಿವಾಸಿ ಮಹಮ್ಮದ್ ಅಲ್ತಾಫ್ ಬೆಟ್ಕುಳಿಕರ್ (30) ಎಂಬುವನನ್ನು ವಶಕ್ಕೆ ಪಡೆಯಲಾಗಿದೆ.

ಯಾವುದೇ ಪಾಸ್‌ ಅಥವಾ ಪರ್ಮಿಟ್‌ ಇಲ್ಲದೆ ಸುಮಾರು 6 ಸಾವಿರ ರೂ ಮೌಲ್ಯದ 116 ಗ್ರಾಂ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಹೊಂದಿದ್ದ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಗಾಂಜಾ ಇದ್ದ ಪ್ಲಾಸ್ಟಿಕ್‌ ಕವರ್‌ ಸೇರಿದಂತೆ ವಿವಿಧ ಖಾಲಿ ಪ್ಲಾಸ್ಟಿಕ್‌ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖೆಯಲ್ಲಿ ಕಾಸರಕೋಡದ ತೌಹೀದ್ ಹಾಗೂ ಹೊನ್ನಾವರದ ನಾಗರಾಜ ಅಚಾರಿ ಎಂಬುವರ ಹೆಸರುಗಳು ಪ್ರಕರಣದಲ್ಲಿ ಕೇಳಿಬಂದಿದ್ದು, ಗಾಂಜಾವನ್ನು ಮೊದಲ ಆರೋಪಿಗೆ ಮಾರಾಟ ಮಾಡಲು ನೀಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share