ಕಾರವಾರ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆಯುತ್ತಿರುವ ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಮಾಡಿಸಿಕೊಳ್ಳಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮಳೆಯಾಶ್ರಿತ ಹಾಗೂ ನೀರಾವರಿ ಭತ್ತದ ಬೆಳೆಗಳಿಗೆ ಇಪ್ಕೋ ಟೋಕಿಯೋ ಜನರಲ್ ಇನ್ಸುರೆನ್ಸ್ ಕಂಪನಿಯ ಮೂಲಕ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿದೆ.
ಈ ಬಾರಿ ಬೆಳೆ ಸಾಲ ಪಡೆದ ರೈತರಿಗೆ ವಿಮೆ ನೋಂದಣಿಗೆ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಗಸ್ಟ್ 31ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ರೈತರು ತಮ್ಮ ಸಮೀಪದ ರಾಷ್ಟ್ರೀಕೃತ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರಿ ಸಂಘ, ಸಿಎಸ್ಸಿ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ನೋಂದಣಿಗೆ ಫ್ರೂಟ್ಸ್ ಐಡಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಹಾಗೂ ಜಮೀನಿನ ಪಹಣಿ ಅಗತ್ಯವಿರುತ್ತದೆ. ರೈತರು ಕೊನೆಯ ದಿನದವರೆಗೆ ಕಾಯದೆ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಕೃಷಿ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 1800 103 5490 ಟೋಲ್ಫ್ರೀ ಸಂಖ್ಯೆಗೆ ಕರೆ ಮಾಡಬಹುದು.