Friday, July 24, 2026
Join WhatsApp Group
HomeStateದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ, ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಹಾಗೂ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ – ವೇಳಾಪಟ್ಟಿ

  • ಫೆಬ್ರವರಿ 28 – ಕನ್ನಡ, ಅರೇಬಿಕ್
  • ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಶ್ಶಾಸ್ತ್ರ
  • ಮಾರ್ಚ್ 3 – ಇಂಗ್ಲಿಷ್
  • ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾರ್ಚ್ 5 – ಇತಿಹಾಸ
  • ಮಾರ್ಚ್ 6 – ಭೌತಶಾಸ್ತ್ರ
  • ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
  • ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
  • ಮಾರ್ಚ್ 10 – ಅರ್ಥಶಾಸ್ತ್ರ
  • ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
  • ಮಾರ್ಚ್ 12 – ಹಿಂದಿ
  • ಮಾರ್ಚ್ 13 – ರಾಜ್ಯಶಾಸ್ತ್ರ
  • ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
  • ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ – ವೇಳಾಪಟ್ಟಿ (ಪರೀಕ್ಷೆ 1)

  • ಮಾರ್ಚ್ 18 – ಪ್ರಥಮ ಭಾಷೆ
  • ಮಾರ್ಚ್ 23 – ವಿಜ್ಞಾನ
  • ಮಾರ್ಚ್ 25 – ದ್ವಿತೀಯ ಭಾಷೆ
  • ಮಾರ್ಚ್ 28 – ಗಣಿತ
  • ಮಾರ್ಚ್ 30 – ತೃತೀಯ ಭಾಷೆ
  • ಏಪ್ರಿಲ್ 2 – ಸಮಾಜ ವಿಜ್ಞಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ – ವೇಳಾಪಟ್ಟಿ (ಪರೀಕ್ಷೆ 2)

  • ಮೇ 18 – ಪ್ರಥಮ ಭಾಷೆ
  • ಮೇ 19 – ವಿಜ್ಞಾನ
  • ಮೇ 20 – ದ್ವಿತೀಯ ಭಾಷೆ
  • ಮೇ 21 – ಗಣಿತ
  • ಮೇ 22 – ತೃತೀಯ ಭಾಷೆ
  • ಮೇ 23 – ಸಮಾಜ ವಿಜ್ಞಾನ

ಪರೀಕ್ಷಾರ್ಥಿಗಳು ಪರೀಕ್ಷಾ ದಿನಾಂಕಗಳನ್ನು ಗಮನದಲ್ಲಿಟ್ಟು ಸೂಕ್ತ ತಯಾರಿ ನಡೆಸುವಂತೆ ಇಲಾಖೆ ಸೂಚಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share