ಉಡುಪಿ: ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಮಲ್ಪೆ ಬಂದರಿನ ಕೊಚ್ಚಿನ್ ಶಿಪ್ ಯಾರ್ಡ್‌ಗೆ ಸಂಬಂಧಿಸಿದ ಕೆಲ ನೌಕರರು ನೌಕಾಪಡೆಯ ಹಡಗುಗಳ ಸಂಖ್ಯೆ ಸೇರಿದಂತೆ ರಹಸ್ಯ ಮಾಹಿತಿಯನ್ನು ವಾಟ್ಸ್ಆ್ಯಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನಕ್ಕೆ ಹಂಚಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಇದೀಗ ಬಂಧಿತನನ್ನು 21 ವರ್ಷದ ಆಲಿಫ್ ಇಸ್ಲಾಂ ಎಂದು ಗುರುತಿಸಲಾಗಿದೆ. ಈತ ಪಶ್ಚಿಮ ಬಂಗಾಳ ಮೂಲದವನಾಗಿದ್ದು, ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಗ್ರಾಮದಲ್ಲಿ ವಾಸಿಸುತ್ತಿದ್ದನೆಂದು ತಿಳಿದುಬಂದಿದೆ. ಅಲ್ಲದೆ, ಬಂಧಿತನು ಬಾಂಗ್ಲಾದೇಶದ ಪ್ರಜೆ ಆಗಿರಬಹುದೆಂಬ ಅನುಮಾನವನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ಮುಂದುವರಿದಿದೆ.
ನೌಕಾಪಡೆ ಮಾಹಿತಿ ಹಂಚಿಕೆ: ಇನ್ನೊಬ್ಬ ಆರೋಪಿ ವಶಕ್ಕೆ
RELATED ARTICLES