ಯಲ್ಲಾಪುರ: ಮುಂಡಗೋಡ ತಾಲೂಕಿನ ಶಿಡ್ಲಗುಂಡಿಯಲ್ಲಿ ಬುಧವಾರ ಎರಡು ಸಾರಿಗೆ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದವರನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರ ಆರೋಗ್ಯ ಸ್ಥಿತಿ ಹಾಗೂ ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಶಾಸಕರು, ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ಒದಗಿಸುವಂತೆ ವೈದ್ಯರಿಗೆ ಸೂಚಿಸಿದರು.
ಅಪಘಾತದ ಹಿನ್ನೆಲೆಯಲ್ಲಿ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ವೈದ್ಯಕೀಯ ಸಿಬ್ಬಂದಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿಜಯ ಮಿರಾಶಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.