Monday, September 7, 2026
Join WhatsApp Group
HomeCrimeಅಲ್ಲದ ವಯಸ್ಸಿನಲ್ಲಿ ದುಡುಕಿನ ನಿರ್ಧಾರ; ಕೃಷಿಕನ ಬದುಕು ಅಂತ್ಯ

ಅಲ್ಲದ ವಯಸ್ಸಿನಲ್ಲಿ ದುಡುಕಿನ ನಿರ್ಧಾರ; ಕೃಷಿಕನ ಬದುಕು ಅಂತ್ಯ

ಕುಮಟಾ: ಆರೋಗ್ಯ ಸಮಸ್ಯೆಯ ವಿಚಾರವಾಗಿ ಮಾನಸಿಕವಾಗಿ ನೊಂದಿದ್ದ 35 ವರ್ಷದ ವ್ಯಕ್ತಿಯೊಬ್ಬರು ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಮಟಾ ತಾಲೂಕಿನ ಗೌಡಕುಳಿಯಲ್ಲಿ ನಡೆದಿದೆ.

ಮೃತರನ್ನು ಎತ್ತಿನಬೈಲ್ ಗೌಡಕುಳಿ ನಿವಾಸಿ ವಸಂತ ವಿಘ್ಣೇಶ್ವರ ಹೆಗಡೆ (35) ಎಂದು ಗುರುತಿಸಲಾಗಿದೆ. ಕೃಷಿ ಹಾಗೂ ಅಡುಗೆ ಕೆಲಸ ಮಾಡಿಕೊಂಡಿದ್ದ ಅವರು ಕಳೆದ ಎರಡು ವರ್ಷಗಳಿಂದ ಹೊಟ್ಟೆಯ ಬಲಭಾಗದಲ್ಲಿ ಗಡ್ಡೆಯಂತಹ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮಾಡಬೇಕೆಂದು ತಿಳಿಸಿದ್ದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎಂದು ಕುಟುಂಬದವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆರೋಗ್ಯ ಸಮಸ್ಯೆಯಿಂದಾಗಿ ಆತಂಕದಲ್ಲಿದ್ದ ವಸಂತ ಅವರು ಆ.27ರಂದು ಸಂಜೆ 4ರಿಂದ 5 ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ದೇವರ ಕೋಣೆಯ ಫ್ಯಾನ್‌ಗೆ ನೈಲಾನ್‌ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಕುಟುಂಬದವರು ಗಮನಿಸಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಮೃತರ ತಂದೆ ವಿಘ್ನೇಶ್ವರ ಹೆಗಡೆ ಅವರು ನೀಡಿದ ದೂರಿನ ಆಧಾರದ ಮೇಲೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share