Monday, September 7, 2026
Join WhatsApp Group
HomeCrimeಶಿರಸಿ | ಮಟಕಾ ಮಾನವ ವಶಕ್ಕೆ

ಶಿರಸಿ | ಮಟಕಾ ಮಾನವ ವಶಕ್ಕೆ

ಶಿರಸಿ: ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಶಿರಸಿ ನಗರ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿರಸಿ ಕಸ್ತೂರಬಾನಗರ ನಿವಾಸಿ ನೂರಅಹ್ಮದ ತಂದೆ ಖಾಸಿಂಸಾಬ್ ತಿಮ್ಮಾಪುರ ಪ್ರಕರಣದ ಆರೋಪಿ. ಆಗಸ್ಟ್‌ 27ರಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ಶಿರಸಿ ನಗರದ ಆನೆಹೊಂಡ ಕಚ್ಚಾ ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಅಂಕೆ–ಸಂಖ್ಯೆಗಳ ಮೇಲೆ ಪಂಥ ಕಟ್ಟಿಸಿಕೊಂಡು ಮಟಕಾ ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಶಿರಸಿ ನಗರ ಪೊಲೀಸ್‌ ಠಾಣೆಯ ಪಿಎಸ್‌ಐ ನಾರಾಯಣ ರಾಠೋಡ (ತನಿಖೆ) ಅವರು ಪಂಚರು ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದಾಗ ಆರೋಪಿಯ ಬಳಿಯಲ್ಲಿ ಮಟಕಾ ಜೂಜಾಟಕ್ಕೆ ಬಳಸುತ್ತಿದ್ದ 510 ರೂ ನಗದು, ಓ.ಸಿ. ಅಂಕೆ–ಸಂಖ್ಯೆಗಳನ್ನು ಬರೆದ ಒಂದು ಚೀಟಿ ಹಾಗೂ ಒಂದು ಬಾಲ್‌ಪೆನ್ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪಿಎಸ್‌ಐ ನಾರಾಯಣ ರಾಠೋಡ ಅವರು ನೀಡಿದ ದೂರಿನ ಆಧಾರದ ಮೇಲೆ ಮೊದಲು ಶಿರಸಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share