Monday, September 7, 2026
Join WhatsApp Group
HomeCrimeಕಾಂಕ್ರೀಟ್ ತಡೆಗೋಡೆಗೆ ಗುದ್ದಿದ ಲಾರಿ; 2 ಲಕ್ಷ ರೂ ನಷ್ಟ

ಕಾಂಕ್ರೀಟ್ ತಡೆಗೋಡೆಗೆ ಗುದ್ದಿದ ಲಾರಿ; 2 ಲಕ್ಷ ರೂ ನಷ್ಟ

ಯಲ್ಲಾಪುರ: ತಾಲೂಕಿನ ಅರಬೈಲ್ ಘಾಟ್‌ನಲ್ಲಿ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ಸಂತೋಷ್ ವಿರೂಪಾಕ್ಷಪ್ಪ ಶಾಗೋಟಿ ಅವರು ನೀಡಿದ ದೂರಿನ ಪ್ರಕಾರ, ರಾಜಸ್ಥಾನ ಮೂಲದ ಮಹೇಂದ್ರ ಸಿಂಗ್ ಭೇರು ಸಿಂಗ್ ಸಾಲಂಕಿ (38) ಎಂಬಾತ ಲಾರಿ ಚಾಲನೆ ಮಾಡುತ್ತಿದ್ದ. ಆಗಸ್ಟ್ 26ರಂದು ಮಧ್ಯಾಹ್ನ 12.10ರ ಸುಮಾರಿಗೆ ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ವೇಳೆ ಅರಬೈಲ್ ಘಾಟ್‌ನ ಶಿರಲೆ ಫಾಲ್ಸ್  ಬಸ್ ನಿಲ್ದಾಣದ ಸಮೀಪ ಲಾರಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ತಡೆಗೋಡೆಗೆ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ತಡೆಗೋಡೆ ಒಡೆದು ಹಾನಿಯಾಗಿದ್ದು, ಸುಮಾರು 2 ಲಕ್ಷ ರೂ ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಲಾರಿಗೂ ಹಾನಿಯಾಗಿದ್ದು, ಘಟನೆಗೆ ಚಾಲಕನ ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಕಾರಣ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share